ಸುದ್ದಿಮೂಲ ವಾರ್ತೆ
ನ.21: ನ್ಯಾಯಮೂರ್ತಿ ಸದಾಶಿವ ಆಯೋಗ ಹಾಗೂ ಸಮಾಜಿಕ ಆರ್ಥಿಕ ಸ್ಥಿತಿಗತಿ ವರದಿಯನ್ನು ಜಾರಿಗೊಳಿಸುವಂತೆ ರಾಜ್ಯ ಬಹುಜನ ಸಮಾಜ ಪಕ್ಷದಿಂದ ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಬಹುಜನ ಸಮಾಜ ಪಕ್ಷದ ರಾಜ್ಯ ಖಚಾಂಚಿ ಡಾ.ಚಿನ್ನಪ್ಪ ಹಾಗಡೆ ಮಾತನಾಡಿ, ಕಳೆದ ಅನೇಕ ವರ್ಷಗಳ ಹಿಂದೆ ನ್ಯಾಯಮೂರ್ತಿ ಸದಾಶಿವ ಆಯೋಗ ಹಾಗೂ ಕಾಂತರಾಜ್ ಆಯೋಗ ವರದಿ ತಯಾರಿಸಿದ್ದರೂ ಇದುವರೆಗೂ ವರದಿಯನ್ನು ಜಾರಿ ತರುವ ಪ್ರಯತ್ನ ನಡೆಸಿಲ್ಲ, ಈ ವರದಿಯಿಂದ ರಾಜ್ಯದ ಹಿಂದುಳಿದ ಮತ್ತು ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಚುನಾವಣೆಯ ಸಂದರ್ಭದಲ್ಲಿ ಜಾರಿ ತರುತ್ತೆವೆಂದು ಹೇಳಿ ವರದಿಯನ್ನು ಮೂಲೆಗುಂಪು ಮಾಡುತ್ತಿವೆ, ಈ ವರದಿ ತಯಾರಿಸಲು ಸರ್ಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದೆ.ಆದರೆ ಸರ್ಕಾರ ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ ಈ ಹಿನ್ನಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ರಾದ ಮಾರಸಂದ್ರ ಮುನಿಯಪ್ಪ ರಾಜ್ಯ ಉಪಾಧ್ಯಕ್ಷರಾದ ಬೀಮಪುತ್ರಿ ರೇವತಿ ರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಮುನಿಯಪ್ಪ, ಬೆಂಗಳೂರು ಜಿಲ್ಲಾ ಉಸ್ತುವಾರಿಗಳಾದ ಗೌರಿ ಶಂಕರ್, ಶಂಕರ್, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸಿ.ಎಲ್.ಮುನಿಯಲ್ಲಪ್ಪ, ಎಮ್, ಸತೀಶ್ ಚಂದ್ರ, ಪರ್ವೇಜ್ ಖಾನ್, ಗೋವಿಂದ ರಾಜ್ ಮತ್ತಿತರರು ಹಾಜರಿದ್ದರು.