ಸುದ್ದಿಮೂಲವಾರ್ತೆ
ಕೊಪ್ಪಳ,ನ.9:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಇಂದು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡದೆ, ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ ಮಾಡಿದರು.
ಉನ್ನತ ಶಿಕ್ಷಣದ ಆಸೆಯನ್ನು ಇಟ್ಟುಕೊಂಡ ರಾಜ್ಯದ ಅದೆಷ್ಟೋ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಸರ್ಕಾರ ನಮ್ಮ ನೆರವಿಗೆ ಧಾವಿಸುತ್ತದೆ. ನಮಗೆ ಆರ್ಥಿಕ ಬೆಂಬಲವನ್ನು ವಿದ್ಯಾರ್ಥಿ ವೇತನದ ರೂಪದಲ್ಲಿ ನೀಡುತ್ತದೆ ಎಂದು ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ ರಾಜ್ಯ ಸರ್ಕಾರ ಶಿಕ್ಷಣಕ್ಕೆ ನೀಡ ಬೇಕಾದ ಪ್ರಾಮುಖ್ಯತೆಯನ್ನು ನೀಡದೆ ಇರುವುದು, ವಿದ್ಯಾರ್ಥಿವೇತನದಲ್ಲೂ ರಾಜಕೀಯವನ್ನು ಮುಂದುವರಿಸುತ್ತಿರುವುದು ಈ ರಾಜ್ಯದ ವಿದ್ಯಾರ್ಥಿಗಳ ಶೋಚನೀಯ ಸ್ಥಿತಿಗೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಎಸ್.ಎಸ್.ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಹಾಗೂ ಇತರ ಇಲಾಖೆಗಳ ಅಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಪದವಿ ಮತ್ತು ಸ್ನಾತ್ತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿವೇತನವನ್ನು ನೀಡದೆ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣವನ್ನು ಅತಂತ್ರ ಸ್ಥಿತಿಗೆ ತರುವ ಕೆಲಸವನ್ನು ಮಾಡಿದೆ. ರಾಜ್ಯದ ರೈತರ ಮಕ್ಕಳ ಶಿಕ್ಷಣಕ್ಕಾಗಿ ಹಿಂದಿನ ಸರ್ಕಾರ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿತ್ತು. ಈ ವಿದ್ಯಾರ್ಥಿವೇತನವನ್ನು ಈಗಿನ ರಾಜ್ಯ ಸರ್ಕಾರ ತಡೆಹಿಡಿಯುವ ಕೆಲಸವನ್ನು ಮಾಡಿ ರೈತರ ಮಕ್ಕಳ ಶಿಕ್ಷಣವನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ.
ಶೈಕ್ಷಣಿಕ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಿಗೆ ಗೊಂದಲವನ್ನು ಉಂಟುಮಾಡಿದ್ದು ಈ ಕೂಡಲೇ ರಾಜ್ಯ ಸರ್ಕಾರ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ನೀಡಿ, ಶಿಕ್ಷಣದಿಂದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ವಂಚಿತರಾಗಿವುದನ್ನು ತಪ್ಪಿಸಬೇಕು ಎಂದು ಈ ಪ್ರತಿಭಟನೆಯ ಮೂಲಕ ವಿದ್ಯಾರ್ಥಿ ಪರಿಷತ್ ಆಗ್ರಹಿಸಯತ್ತದೆ.
ಕೊಪ್ಪಳನಗರ ದಿಂದ ತಾಲೂಕು ಕ್ರೀಡಾಂಗಣ ದಿಂದ ಅಶೋಕ್ ಸರ್ಕಲ್ ಮಾರ್ಗವಾಗಿ ತಹಸೀಲ್ದಾರ್ ಕಚೇರಿ ವರೆಗೂ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಎಬಿವಿಪಿ ಕೊಪ್ಪಳ ಜಿಲ್ಲಾ ಸಂಚಾಲಕ ಶಶಾಂಕ್ ಪಾಟೀಲ್ ಇಲ್ಲದಿದ್ದರೆ ನಗರ ಕಾರ್ಯದರ್ಶಿ ಹಮ್ಮಿಗೇಶ್, ಸಹ ಕಾರ್ಯದರ್ಶಿ ಸಂತೋಷ್
ಎಬಿವಿಪಿ ಕಾರ್ಯಕರ್ತರಾದ ಆದಿತ್ಯ, ಮಹೇಶ್, ಲಕ್ಷ್ಮಣ, ಆಕಾಶ್, ವೀರೇಂದ್ರ, ನವೀನ್, ಕಿರಣ್, ಸಂಗೀತಾ, ಮಂಜುಳಾ, ಸಾವಿತ್ರಿ, ರೇಖಾ ಉಪಸ್ಥಿತರಿದ್ದರು. ಹಾಗೂ ಇತರೆ 800 ವಿದ್ಯರ್ಥಿಗಳು ಭಾಗವಹಿಸಿದರು.