ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.13
ಚುನಾವಣಾ ಆಯೋಗ ನಡೆಸುತ್ತಿರುವ ಮತಗಳವು ವಿರುದ್ಧ ಭಾನುವಾರ ಎಐಸಿಸಿ ಹಮ್ಮಿಕೊಂಡಿರುವ ಮತಗಳವು ವಿರುದ್ಧದ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಉಪ ಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರ ಪ್ರಶ್ನೆೆಗಳಿಗೆ ಉತ್ತರಿಸಿದರು.
ಮತದಾರರ ಹಕ್ಕಿಿನ ರಕ್ಷಣೆಗಾಗಿ ಮತ ಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೇವೆ. ಮತ ಕಳ್ಳತನ ವಿರುದ್ಧದ ಹೋರಾಟ ನಮ್ಮ ರಾಜ್ಯದಿಂದಲೇ ಆರಂಭವಾಗಿದ್ದು, ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ನಮ್ಮ ರಾಜ್ಯದಲ್ಲಿ ಚಿಲುಮೆ ಸಂಸ್ಥೆೆ ಮೂಲಕ ಈ ಹಿಂದೆ ಸಾವಿರಾರು ಬಿಎಲ್ಓಗಳನ್ನು ನೇಮಕ ಮಾಡಿ ಅಕ್ರಮ ಎಸಗಲಾಗಿತ್ತು ಎಂದು ತಿಳಿಸಿದರು.
ಕಾಂಗ್ರೆೆಸ್ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆೆ ಹಾಗೂ ಸಂವಿಧಾನ ಬದ್ಧವಾಗಿ ನಡೆದುಕೊಂಡು ಬಂದಿದೆ. ಈಗಾಗಲೇ ನಮ್ಮ ರಾಜ್ಯದ ಎಲ್ಲಾ ಮೂಲೆಗಳಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ದೆಹಲಿಗೆ ರೈಲು ಹಾಗೂ ಇತರೆ ಸಾರಿಗೆ ವ್ಯವಸ್ಥೆೆ ಮೂಲಕ ತೆರಳಿದ್ದಾರೆ. ಈ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
ನಾವು ಚುನಾವಣೆ ಸೋತಿರಬಹುದು ಆದರೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಹೀಗಾಗಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಈ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಿಕೊಂಡಿದ್ದಾರೆ ಎಂದರು.
ನೋಟೀಸ್ಗೆ ಉತ್ತರ ನೀಡುವೆ
ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, ನಾನು ಶನಿವಾರ ದೆಹಲಿ ತಲುಪುವುದೇ ತಡವಾಗುತ್ತದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆೆ ಸಂಬಂಧಿಸಿದಂತೆ ನನಗೆ ನೋಟೀಸ್ ಬಂದಿದ್ದು ಅದಕ್ಕೆೆ ನಾನು ಉತ್ತರ ನೀಡಬೇಕಿದೆ. ಎಲ್ಲಾ ದಾಖಲೆ ತೆಗೆದುಕೊಂಡು ಹೋಗಿ ಅವರಿಗೆ ಉತ್ತರ ನೀಡುತ್ತೇನೆ ಎಂದರು.
ಡ್ರಗ್ ಪೆಡ್ಲರ್ ಮನೆಗಳ ಮೇಲೆ ಬುಲ್ಡೋೋಜರ್ ಹತ್ತಿಿಸಬೇಕು ಎಂಬ ಗೃಹ ಸಚಿವರ ಹೇಳಿಕೆ ಬಗ್ಗೆೆ ಕೇಳಿದಾಗ, ಇದರ ಬಗ್ಗೆೆ ಆನಂತರ ಮಾತನಾಡುತ್ತೇನೆ ಎಂದು ತಿಳಿಸಿದರು.

