ಸುದ್ದಿಮೂಲವಾರ್ತೆ
ಕೊಪ್ಪಳ,ಆ.29: ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಹಾಗು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದಿಂದ ಬೃಹತ್ ಮೆರವಣಿಗೆ ನಡೆಸಲಾಯಿತು.
ಕೊವಿಡ್ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಕಿಟ್ ನೀಡುವ ನೆಪದಲ್ಲಿ ಭ್ರಷ್ಟಾಚಾರ ನಡೆದಿದೆ. ತನಿಖೆಯಾಗಬೇಕು.ಕಟ್ಟಡ ಕಾರ್ಮಿಕರಿಗೆ ನಿವೇಶನ
ಕಟ್ಟಡ ಕಾರ್ಮಿಕರಿಗೆ ಕಟ್ಟಡ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸಹಾಯಧನ ನೀಡಬೇಕು. ನಕಲಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹೊಂದಿದವರ ಪತ್ತೆ ಮಾಡಬೇಕುಕಟ್ಟಡ ಕಾರ್ಮಿಕ ಮಕ್ಕಳ ಶೈಕ್ಷಣಿಕ ಧನಸಹಾಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಬೇಕು ಸೇರಿದಂತೆವ
ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಭಾಗ್ಯನಗರದಿಂದ ಜಿಲ್ಲಾಡಳಿತ ಭವನದವರೆಗೂ ಮೆರವಣಿಗೆಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ ಎ ಗಫಾರ, ತುಕರಾಂ ಪಾತ್ರೋಟ. ಮೌಲಾಸಾಬ ಕಪಾಲಿ ಸೇರಿ ಹಲವರು ಇದ್ದರು.