ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.18: ದೇವದುರ್ಗ ತಾಲ್ಲೂಕಿನಲ್ಲಿ ನಿರಾವರಿ ವಂಚಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವಂತೆ ಶಾಸಕಿ ಕರೆಮ್ಮ ನಾಯಕ್ ಒತ್ತಾಯಿಸಿದರು.
ವಿಧಾನಸಭೆಯಲ್ಲಿಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಏಷ್ಯಾ ಖಂಡದಲ್ಲಿಯೇ ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಹಣೆಪಟ್ಟಿ ಕಟ್ಟಿಕೊಂಡಿರುವ ದೇವದುರ್ಗ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದಿದೆ. ಈ ತಾಲ್ಲೂಕಿಗೆ ಬಂದ ಅನುದಾನ ಕನ್ನಡಿಯಲ್ಲಿನ ಗಂಟು ಎಂಬಂತೆ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಾರಾಯಣಪುರ ಬಲದಂಡೆ ನಾಲೆಯಿಂದ ತಾಲ್ಲೂಕು ನೀರಾವರಿ ಆಗುತ್ತಿದೆ. ಆದರೆ, ವಿತರಣಾ ನಾಲೆ 16,17,18 ಪ್ರದೇಶಕ್ಕೆ ನೀರು ತಲುಪದೆ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಕಾರಣ ನೀಲು ತಲುಪಿಸಲು ನಾಲೆಗಳ ಅಭಿವೃದ್ಧಿಗೆ ಒತ್ತು ನಿಡಬೇಕು ಹಾಗೂ 5ಎ ಕಾಲುವೆಗೆ ಹೆಚ್ಚಿನ ನೀರಾವರಿ ಕಲ್ಪಿಸಬೇಕು ಎಂದು ಎಂದು ಒತ್ತಾಯಿಸಿದ ಕರೆಮ್ಮ ನಾಯಕ್, ಅರೆಕೇರಾ, ಗಲಗ್ ಭಾಗಕ್ಕೆ ನೀರಾವರಿ ಕಲ್ಪಿಸಬೇಕು ಎಂದರು.
ತಮ್ಮ ಕ್ಷೇತ್ರದಾದ್ಯಂತ ವಿದ್ಯುತ್ ಸಮಸ್ಯೆ ಇದೆ. ಸಮರ್ಪಕವಾಗಿ ವಿದ್ಯುತ್ ವಿತರರಕಗಳು ಸಿಗುತ್ತಿಲ್ಲ ಮತ್ತು ಕೃಷ್ಣಾ ನದಿ ಪ್ರವಾಹದಿಂದ 20ಕ್ಕೂ ಹೆಚ್ಚು ಹಳ್ಳಿಗಳು ಸಮಸ್ಯೆಗೆ ಈಡಾಗುತ್ತಿದ್ದು, ಅವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದ ಅವರು, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಆದರೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ. ಅದನ್ನು ಪರಿಹರಿಸಲು ಒತ್ತಾಯಿಸಿದರು.
ತಾಲ್ಲೂಕಿನಲ್ಲಿ ಮಹಿಳೆಯರಿಗೆ ಶೌಚಾಲಯ ನಿರ್ಮಾಣ ಮಾಡಬೇಕು ಹಾಗೂ ರಾಯಚೂರು ವಿಶ್ವವಿದ್ಯಾಲಯಕ್ಕೆ 206 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದರೂ ಅನುದಾನ ನೀಡಿಲ್ಲ. ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಲು ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದು ಒತ್ತಾ
ಯಿಸಿದರು.