ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ.1: ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರಜಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಪ್ರಜಾ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸಚಿವರಾದ ಆರ್. ಅಶೋಕ್, ಡಾ. ಸುಧಾಕರ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಜರಿದ್ದರು.