ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜು 21 : ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಜ್ಯೋತಿ ಬೆಳಗಿಸಿ, ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ಸೇವೆ ಒದಗಿಸುತ್ತಿಲ್ಲವೆಂಬ ದೂರುಗಳು ಕಛೇರಿಯಲ್ಲಿ ಸ್ವೀಕೃತಿಯಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಕುಂದುಕೊರತೆಗಳ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಿ ಸಾರ್ವಜನಿಕರಿಗೆ ಪರಿಹಾರ ನೀಡಲು ಕ್ರಮವಹಿಸಬೇಕು ಎಂದರು.
ಸಾದಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಅಹವಾಲು ಸ್ವೀಕರಿಸಲಾಯಿತು. ನಿವೇಶನ, ಮೂಲಭೂತ ಸೌಕರ್ಯಗಳು, ಬಸ್ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಆಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ಕಲೆ ಹಾಕಲಾಯಿತು.
ಈ ಸಂದರ್ಭದಲ್ಲಿ ಸಾದಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಾದ ನಾರಾಯಣಮೂರ್ತಿ, ಸಾದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಯವರು ಮತ್ತು ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಇತರರು ಹಾಜರಿದ್ದರು.