ಸುದ್ದಿಮೂಲ ವಾರ್ತೆ ಕಲಬುರಗಿ, ಜ.03:
ಅಟಲ್ಜೀ ಜನಸ್ನೇಹಿ ಕೇಂದ್ರದ ಮೂಲಕ ಡಿಸೆಂಬರ್-2025ರ ಮಾಹೆಯಲ್ಲಿ ಸ್ವೀಕರಿಸಿದ 39,964 ಅರ್ಜಿಗಳಲ್ಲಿ 38,133 ಅರ್ಜಿಗಳನ್ನು ಕಾಲಮಿತಿಯಲ್ಲಿಯೇ ವಿಲೇವಾರಿ ಮಾಡಿ ಶೇ.95.42ರಷ್ಟು ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿಯೇ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ ಜಿಲ್ಲೆ ಮತ್ತೆೆ ನಂಬರ್-1 ಸ್ಥಾಾನ ಪಡೆದಿದೆ.
ನಾಡ ಕಚೇರಿಯಿಂದ ಕಂದಾಯ ಇಲಾಖೆಯ 41 ಸೇವೆ ನೀಡಲು ಡಿಸೆಂಬರ್ -2025ರ ಮಾಹೆಯಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ 9.31 ವಿಲೇವಾರಿ ಸೂಚ್ಯಂಕದ ಪ್ರಕಾರ ವಿಲೇವಾರಿ ಮಾಡುವ ಮೂಲಕ ಈಶಾನ್ಯದ ತುದಿಯಲ್ಲಿರುವ ಕಲಬುರಗಿ ಜಿಲ್ಲೆ ಸಾರ್ವಜನಿಕರ ಸೇವೆ ವಿಲೇವಾರಿಯಲ್ಲಿ ರಾಜ್ಯದ ಗಮನ ಸೆಳೆದಿದೆ.
ಟಾಪ್ 10ನಲ್ಲಿ ಕಲ್ಯಾಾಣದ 4 ಜಿಲ್ಲೆಗಳು : ಇನ್ನು ರಾಜ್ಯದಾದ್ಯಂತ ಜಿಲ್ಲಾವಾರು ಅರ್ಜಿ ವಿಲೇವಾರಿ ಪಟ್ಟಿಿ ಅವಲೋಕಿಸಿದಾಗ ಅಗ್ರ 10 ರಲ್ಲಿ ಕಲಬುರಗಿ, ವಿಜಯನಗರ ಜಿಲ್ಲೆಗಳು ಕ್ರಮವಾಗಿ ಪ್ರಥಮ, ದ್ವಿಿತೀಯ ಸ್ಥಾಾನ ಪಡೆದರೆ, ರಾಯಚೂರು ನಾಲ್ಕನೇ ಮತ್ತು ಯಾದಗಿರಿ ಜಿಲ್ಲೆ ಒಂಭತ್ತನೇ ಸ್ಥಾಾನ ಪಡೆದಿದೆ. ಈ ಮೂಲಕ ಕಲ್ಯಾಾಣ ಕರ್ನಾಟಕ ಭಾಗದ 4 ಜಿಲ್ಲೆಗಳು ಸಾರ್ವಜನಿಕ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಂತಾಗಿದೆ.

