ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.12: ಬಿಜೆಪಿ ಟಿಕೆಟ್ ಸಿಗದಿದಿರುವುದರಿಂದ ಮುನಿಸಿಕೊಂಡಿರುವ ಆರ್. ಶಂಕರ್ ವಿಧಾನ ಪರಿಷತ್ ಸದಸ್ಯತ್ವ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ಬುಧವಾರ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಣೆಬೆನ್ನೂರು ಕ್ಷೇತ್ರದ ನಮ್ಮ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಪಕ್ಷಕ್ಕೆ ರಾಜೀನಾಮೆ ನೀಡುತ್ತೆದ್ದೇನೆ ಎಂದು ಆರ್.ಶಂಕರ್ ಹೇಳಿಕೆ ನೀಡಿದ್ದಾರೆ.
ಯಾರು ಮೇಲೂ ನನಗೆ ಸಿಟ್ಟಿಲ್ಲ. ನನ್ನ ಮೇಲೆ ನನಗೆ ಸಿಸ್ಟು ಅಷ್ಟೆ. ಒಳ್ಳೆಯದನ್ನು ಮಾಡಲು ಹೋಗಿ ಈ ಪರಿಸ್ಥಿತಿಯನ್ನು ತಂದುಕೊಂಡಿದ್ದೇನೆ. ನನ್ನ ಬೆಂಬಲಿಗರೊಂದಿಗೆ ಚರ್ಚೆ ನಡೆದಿ ಇನ್ನು ಕೆಲವೇ ದಿನಗಳಲ್ಲಿ ನನ್ನ ಅಂತಿಮ ನಿರ್ಧಾರವನ್ನು ತಿಳಿಸುತ್ತೇನೆ ಏಮಧೃಊ.
ರಾಣೆಬೆನ್ನೂರು ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧೆಗೆ ನಿಲ್ಲುತ್ತೆನೋ ಅಥವಾ ಬೇರೆ ಪಕ್ಷದೊಂದಿಗೆ ಸ್ಪರ್ಧೆಗೆ ಇಳಿಯುತ್ತಿನೋ ಎಂಬುವುದನ್ನು ಎರಡ್ಮೂರು ದಿನಗಳಲ್ಲಿ ತಿಳಿಸುತ್ತೇನೆ ಎಂದ ಅವರು ಸ್ಪರ್ಧಿಸುವುದು ಮಾತ್ರ ಖಚಿತ ಎಂದು ಹೇಳಿದ್ದಾರೆ.