ಸುದ್ದಿಮೂಲ ವಾರ್ತೆ ರಾಯಚೂರು, ಜ.01:
ಜನವರಿ 29, 30 ಹಾಗೂ 31ರಂದು ಮೂರು ದಿನಗಳ ಕಾಲ ನಿಗದಿಯಾದ ರಾಯಚೂರು ಉತ್ಸವ ತಯಾರಿ ನಿಮಿತ್ತ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಮತ್ತೊೊಂದು ಸುತ್ತಿಿನ ಸಿದ್ಧತಾ ಸಭೆಯು ಜನವರಿ 01ರಂದು ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ, ಮೊದಲನೇ ಸಭೆಯ ನಂತರ ಇದುವರೆಗೆ ನಡೆದ ಸಿದ್ಧತೆಯ ಬಗ್ಗೆೆ ಮತ್ತು ಆಯಾ ಸಮಿತಿಗಳು ನಿರ್ವಹಿಸಬೇಕಾದ ಕಾರ್ಯಗಳ ಬಗ್ಗೆೆ ಜಿಲ್ಲಾಧಿಕಾರಿಗಳು, ಸಮಿತಿವಾರು ಉತ್ಸವ ಹಿನ್ನೆೆಲೆಯಲ್ಲಿ ರಚಿಸಿದ ವಿವಿಧ 22 ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದುಕೊಂಡರು.
ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಮಾತನಾಡಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿದ್ದಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ರಾಯಚೂರು ಪಾಲಿಕೆಯ ಸಮಿತಿ ಕಾರ್ಯದರ್ಶಿ ಕೃಷ್ಣ ಶಾವಂತಗೇರಿ, ನಗರಾಭಿವೃದ್ಧಿಿ ಕೋಶದ ಯೋಜನಾ ನಿರ್ದೇಶಕ ಈರಣ್ಣ ಬಿರಾದಾರ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸಂತೋಷರಾಣಿ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

