ಸುದ್ದಿಮೂಲ ವಾರ್ತೆ
ಮೈಸೂರು, ಜು.28 : ಪ್ರೀತಿಗೆ ಯುವತಿಯ ಮನೆಯವರು ನಿರಾಕರಿಸಿದ್ದರಿಂದ ತೀವ್ರವಾಗಿ ಮನನೊಂದ ರೇಲ್ವೆ ಎಂಜಿನಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ದಾವಣಗೆರೆ ಮೂಲದ ಕೇಶವ್ (29) ಆತ್ಮಹತ್ಯೆಗೆ ಶರಣಾದವರು. ಕಳೆದ 2 ತಿಂಗಳಿಂದ ಮೈಸೂರಿನ ಸರಸ್ವತಿ ಪುರಂನ ಬಾಡಿಗೆ ಮನೆಯಲ್ಲಿ ಕೇಶವ್ ವಾಸವಿದ್ದು, ರೈಲ್ವೆ ಇಲಾಖೆಯಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತಿದ್ದರು.
ಕೇಶವ್ ಹಲವು ವರ್ಷಗಳಿಂದ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದರು. ಆದರೆ ಯುವತಿಯ ಮನೆಯವರು ಕೇಶವ್ ಪ್ರೀತಿಯನ್ನು ನಿರಾಕರಿಸಿದ್ದರು. ಹೀಗಾಗಿ ಮನನೊಂದು ಕೇಶವ್ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ತಡೆಗಟ್ಟಲು ಮತ್ತು ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ಸಹಯೋಗದೊಂದಿಗೆ SAHAI ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ. ಸಂಪರ್ಕಸಂಖ್ಯೆ: 080 – 25497777