ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಅ. 2 : ಸಮಾಜದಲ್ಲಿರುವ ಪ್ರತಿಯೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರ ಜೀವನಾದರ್ಶಗಳನ್ನು ಮೈಗೂಡಿಸಿಕೊಂಡು ಆದರ್ಶ ಸಮಾಜವನ್ನು ನಿರ್ಮಿಸಬೇಕೆಂದು ಎಬಿಡಿ ಸಂಸ್ಥೆಯ ಅಧ್ಯಕ್ಷ ರಾಜೀವ್ಗೌಡ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸತ್ಯ ಮತ್ತು ಅಹಿಂಸೆಯ ಮೂಲಕ ಅನೇಕ ಚಳುವಳಿಗೆಗಳನ್ನು ನಡೆಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರಯತ್ನದಿಂದ ಮತ್ತು ಅನೇಕ ಮುಖಂಡರ ಹೋರಾಟದ ಫಲದಿಂದಾಗಿ ನಮಗೆ ಸ್ವಾತಂತ್ರ್ಯ ಲಭಿಸಿದ್ದು ಅದನ್ನು ಸಂರಕ್ಷಿಸಬೇಕೆಂದು ಮನವಿ ಮಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ದ ಸಂದರ್ಭದಲ್ಲಿ ಅಂದಿನ ಪ್ರಧಾನಮಂತ್ರಿ ಡಾ.ಮನಮೋಹನ್ಸಿಂಗ್ ಅವರು ಜಾರಿಗೊಳಿಸಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಮೂಲಕ ದೇಶಾದ್ಯಂತ ಗ್ರಾಮೀಣ ಪ್ರದೇಶದ ಸ್ವರೂಪವೇ ಬದಲಾಗಿದೆ. ಅದೇ ರೀತಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರಿನಲ್ಲಿ ಗ್ರಾಪಂಗಳಿಗೆ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ ಎಂದರು.
ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ,ನಗರಸಭೆಯ ಉಪಾಧ್ಯಕ್ಷ ಅಫ್ಸರ್ಪಾಷ, ಟಿಕೆ ನಟರಾಜ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ಗೌಡ, ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರೆಡ್ಡಿ,ಕೆಪಿಸಿಸಿ ಸದಸ್ಯ ನಾರಾಯಣಸ್ವಾಮಿ(ಬಂಗಾರಪ್ಪ), ಯುವ ಕಾಂಗ್ರೆಸ್ ಅಧ್ಯಕ್ಷ ನರೇಂದ್ರ, ಫಿದಾಹುಸೇನ್, ಸೈಯದ್ ಬಾಬಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀನಾಥ್, ಮಹಬೂಬ್ ಪಾಷ, ನಗರಸಭಾ ಸದಸ್ಯ ಕೃಷ್ಣಮೂರ್ತಿ, ರಿಯಾಜ್, ತಾಲೂಕು ಕುರುಬರ ಸಂಘದ ಕಾರ್ಯದರ್ಶಿ ರಾಮಾಂಜಿ, ಆನೂರು ರವಿ ಮತ್ತಿತರರು ಉಪಸ್ಥಿತರಿದ್ದರು.