ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.15: ನಗರ ಜೆಡಿಎಸ್ ಘಟಕದ ಅಧ್ಯಕ್ಷರಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಹೆಚ್.ಎಂ. ರಮೇಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ.
ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಮೇಶ್ ಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ನೇಮಕ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.