ಸುದ್ದಿಮೂಲ ವಾರ್ತೆ
ತುಮಕೂರು, ಅ.11 : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.9 ರಂದು ತುಮಕೂರು ಜಿಲ್ಲೆಯಾದ್ಯಂತ ಇರುವ ಎಲ್ಲಾ ನ್ಯಾಯಾಲಯಗಳಲ್ಲಿ 4ನೇ ಮತ್ತು ಈ ವರ್ಷದ ಕಡೆಯ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಗೀತಾ ತಿಳಿಸಿದರು.
ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,
ಲೋಕ ಅದಾಲತ್ನ ಮೂಲ ಉದ್ದೇಶ ಪಕ್ಷಗಾರರು ರಾಜೀ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೆ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದ್ದು, ಪಕ್ಷಗಾರರ ಮದ್ಯದಲ್ಲಿರುವ ವೈಮನಸ್ಸು ಕಡಿಮೆ ಮಾಡಿ ಸೌಹಾರ್ಧತೆ ಹೆಚ್ಚಾಗುತ್ತದೆ. ಇದರಿಂದ ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ಹೆಚ್ಚು ಅವಶ್ಯಕತೆ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ನ್ಯಾಯಾಧೀಶರು ಹೆಚ್ಚು ಒತ್ತು ಕೊಟ್ಟು ಚಾಲ್ತಿಯಲ್ಲಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದರು.
1 ವರ್ಷದ ಅವಧಿಯಲ್ಲಿ ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ 4 ರಾಷ್ಟ್ರೀಯ ಜನತಾ ನ್ಯಾಯಾಲಯ ಕಾರ್ಯಕ್ರಮ ಆಯೋಜನೆಗೊಳ್ಳುತ್ತಿದ್ದು, ಡಿ.21 ರಂದು ನಡೆಯುವ ಜನತಾ ನ್ಯಾಯಾಲಯ ಈ ವರ್ಷದ ಕೊನೆಯ ಹಾಗೂ 4ನೇ ಕಾರ್ಯಕ್ರಮವಾಗಿರುತ್ತದೆ. ಉಭಯ ಪಕ್ಷಗಾರರು ಲೋಕ ಅದಾಲತ್ನ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದರು.