ಸುದ್ದಿಮೂಲ ವಾರ್ತೆ
ಬೆಂಗಳೂರು, ಸೆ.27: ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿತ್ತಿರುವ ಕ್ರಮವನ್ನು ವಿರೋಧಿಸಿ ಸೆ. 29 ರಂದು ನಡೆಯುವ ಕರ್ನಾಟಕ ಬಂದ್ಗೆ ಬೆಂಬಲ ನೀಡಲಾಗುವುದು ರಂದು ಬೆಂಗಳೂರು ನಗರ ಸರ್ಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘದ ಅಧ್ಯಕ್ಷ ಜೆ.ಬಿ. ಕುಮಾರ್ ತಿಳಿಸಿದ್ದಾರೆ.
ರಾಜ್ಯದ ನೆಲ, ಜಲ, ಭಾಷೆಗೆ ಧಕ್ಕೆ ಬಂದಾಗ ರಾಜ್ಯದ 22000 ಕ್ಕೂ ಹೆಚ್ಚು ಪಡಿತರ ವಿತರಕರು ಸಂಪೂರ್ಣ ಬೆಂಬಲ ನೀಡಿದ್ದೇವೆ. ಕರ್ನಾಟಕ ಬಂದ್ಗೆ ರಾಜ್ಯದ ನಮ್ಮ ಎಲ್ಲಾ ವಿತರಕರ ಜೊತೆಗೆ ಬೆಂಗಳೂರು ನಗರದ ಅನೌಪಚಾರಿಕ ಪ್ರದೇಶದ 750 ನ್ಯಾಯಬೆಲೆ ಅಂಗಡಿಗಳು ಮತ್ತು ಬೆಂಗಳೂರು ನಗರದ ಐದು ತಾಲ್ಲೂಕುಗಳು 750 ಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳು ಒಟ್ಟು 1500 ನ್ಯಾಯಬೆಲೆ ಅಂಗಡಿಗಳ ಮಾಲೀಕರು, ಪಡಿತರ ವಿತರಕರ ಹಿತರಕ್ಷಣಾ ಸಂಘ ಪದಾಧಿಕಾರಿಗಳು ತಮ್ಮ ಅಂಗಳನ್ನು ಬಂದ್ ಮಾಡಿ ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.