ಸುದ್ದಿಮೂಲವಾರ್ತೆ
ಕೊಪ್ಪಳ,ಅ.26:ಕೊಪ್ಪಳ ಜಿಲ್ಲೆಯಲ್ಲಿ ಭೀಕರ ಬರಗಾಲ ಆವರಿಸಿದೆ. ರಾಜ್ಯ ಸರಕಾರ ರೈತರ ನೆರವಿಗೆ ಬರಬೇಕೆಂದು ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಗೊಂದಿ ಆಗ್ರಹಿಸಿದರು.
ಅವರು ಕೊಪ್ಪಳ ಮೀಡಿಯಾ ಕ್ಲಬ್ ನಲ್ಲಿ ಮಾತನಾಡಿ ಪ್ರತಿ ಎಕರೆ 20 ಸಾವಿರ ರೂಪಾಯಿ ಬರ ಪರಿಹಾರ ನೀಡಬೇಕು. ಜಾನುವಾರುಗಳಿಗೆ ಸೂಕ್ತ ಮೇವಿನ ವ್ಯವಸ್ಥೆ ಕಲ್ಪಿಸಬೇಕು.ರೈತರಿಗೆ 10 ತಾಸು ವಿದ್ಯುತ್ ನೀಡಬೇಕು. ಹೀಗೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ತೀವ್ರ ಬರವಿದೆ. ಈ ಸರಕಾರ ಕಾರ್ಖಾನೆಗಳಿಗೆ 12 ತಾಸು ನೀಡಿ ಈಗ ಕೇವಲ 5 ತಾಸು ವಿದ್ಯುತ್ ನೀಡುತ್ತಿದ್ದಾರೆ. ರೈತರ ನೆರವಿಗೆ ಬರಬೇಕಾದ ಸರಕಾರ ವಿದ್ಯುತ್ ಕಡಿತದ ಬಾಗ್ಯ ನೀಡಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ್ಯದರ್ಶಿ ಮಲ್ಲಿಕಾರ್ಜುನಗೌಡ ಪೊಲೀಸ್. ತಾಲೂಕಾ ಸಹ ಕಾರ್ಯದರ್ಶಿ ಈಶಪ್ಪ ದಿನ್ನಿ. ರೈತರಾದ ಹನುಮರಡ್ಡಿ ಯಡ್ರಾಮನಹಳ್ಳಿ ಇದ್ದರು.