ಸುದ್ದಿಮೂಲ ವಾರ್ತೆ
ಮಾಲೂರು, ಮೇ 22: ಸರ್ಕಾರಿ ನೌಕರರ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಬಗೆಹರಿಸಿ, ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಿ ಶಾಸಕರ ಕೈ ಬಲ ಪಡಿಸುವಂತೆ ನೂತನ ಮುಖ್ಯಮಂತ್ರಿ ಬಳಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮುನೇಗೌಡ ಮನವಿ ಮಾಡಿದರು.
ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದಲ್ಲಿ ಶಾಸಕ ಕೆ.ವೈ. ನಂಜೇಗೌಡರ ನೇತೃತ್ವದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನoದನಗಳನ್ನು ಸಲ್ಲಿಸಿದರು.
ರಾಜ್ಯದಲ್ಲಿ ಸರ್ಕಾರಿ ನೌಕರರ ಹಲವಾರು ಬೇಡಿಕೆ ಮತ್ತು ಸಮಸ್ಯೆಗಳು ಇದ್ದು,ಅವುಗಳನ್ನು ತಮ್ಮ ಅವಧಿಯಲ್ಲಿ ಬಗೆಹರಿಸಿ ಸರ್ಕಾರಿ ನೌಕರರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ಮಾಲೂರು ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಶಾಸಕ ಕೆ.ವೈ. ನಂಜೇಗೌಡ ಹಲವಾರು ಕನಸುಗಳನ್ನು ಹೊಂದಿದ್ದಾರೆ. ಆ ಕನುಸುಗಳು ನನಸಾಗೋ ಕಾಲ ಕೂಡಿಬಂದಿದ್ದು, ತಮ್ಮ ಅವಧಿಯಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಮಾಲೂರು ತಾಲ್ಲೂಕಿನ ಸರ್ವೋತೋಮುಖ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮುನೇಗೌಡ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.