ಸುದ್ದಿಮೂಲ ವಾರ್ತೆ
ರಾಮನಗರ, ಜೂ 12 : ರಾಮನಗರ ತಾಲ್ಲೂಕು ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗಧಿಯಾಗಿದೆ.
ನಗರದಲ್ಲಿರುವ ಜಿಲ್ಲಾ ಪಂಚಾಯಿತಿ ಭವವನದ ಸಭಾಂಗಣದಲ್ಲಿ ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಯಾಗಿತ್ತು. 2020ನೇ ಸಾಲಿನಲ್ಲಿ ಗ್ರಾಮಪಂಚಾಯ್ತಿಗಳಿಗೆ ಚುನಾವಣೆ ನಡೆದಿತ್ತು. ಮೊದಲನೇ ಅವಧಿ ಮುಕ್ತಾಯವಾಗಲಿದ್ದು, ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗಧಿಯಾಗಿದೆ.
ರಾಮನಗರ ತಾಲ್ಲೂಕಿನಲ್ಲಿರುವ 20 ಗ್ರಾಮ ಪಂಚಾಯಿತಿಗಳ ಪೈಕಿ 10 ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ 10 ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಈ ಪೈಕಿ 4 ಸ್ಥಾನಗಳು ಮಹಿಳೆಯರಿಗೆ ಮೀಸಲು ನಿಗಧಿಯಾಗಿದೆ. ಪರಿಶಿಷ್ಟ ಜಾತಿಯ 4 ಸ್ಥಾನಗಳಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲು, ಪರಿಶಿಷ್ಟ ಪಂಗಡದ ಒಂದು ಸ್ಥಾನವನ್ನು ಮಹಿಳೆಗೆ ಮೀಸಲಿಡಲಾಗಿದೆ. ಸಾಮಾನ್ಯ–ಎ ವರ್ಗದಲ್ಲಿ 4 ಸ್ಥಾನಗಳಿದ್ದು, ಅದರಲ್ಲಿ 2 ಸ್ಥಾನ ಮಹಿಳೆಯರಿಗೆ ಮೀಸಲು ಹಾಗೂ ಸಾಮಾನ್ಯ ಬಿ ವರ್ಗ ಒಂದು ಸ್ಥಾನ ಅದು ಮಹಿಳೆಗೆ ಮೀಸಲಾಗಿದೆ.
ಮೀಸಲು ನಿಗಧಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಬಿ.ಸಿ, ತಹಶೀಲ್ದಾರ್ ತೇಜಸ್ವಿನಿ ಮುಂತಾದವರು ಹಾಜರಿದ್ದರು.