ಸುದ್ದಿಮೂಲ ವಾರ್ತೆ ಬೆಂಗಳೂರು, ಅ.07:
ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಇನ್ನೂ ಮುಂದುವರಿಯುತ್ತಿಿರುವುದರಿಂದ ದಸರಾ ರಜೆಯನ್ನು ಅ.18ರವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ದಸರಾ ರಜೆ ಪೂರ್ಣಗೊಂಡು ಬುಧವಾರ (ಅ.8)ರಿಂದ ಶಾಲೆಗಳು ಪುನರಾರಂಭವಾಗಬೇಕಿತ್ತು. ಈ ಹಿನ್ನೆೆಲೆಯಲ್ಲಿ ನಿನ್ನೆೆಯಷ್ಟೇ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆಯು ಸಮೀಕ್ಷೆ ಮುಗಿಯುವವರೆಗೂ ಅರ್ಧದಿನ ಶಾಲೆ ನಡೆಸುವುದಾಗಿ ಘೋಷಿಸಿ ಜಿಲ್ಲೆಗಳಲ್ಲಿ ಅ.12ರವರೆಗೆ ಮತ್ತು ಗ್ರೇೇಟರ್ ಬೆಂಗಳೂರು ಪ್ರಾಾಧಿಕಾರ ವ್ಯಾಾಪ್ತಿಿಯಲ್ಲಿ ಅ.24ರವರೆಗೆ ಶಾಲಾ ಸಮಯದಲ್ಲಿ ವಿನಾಯಿತಿ ನೀಡಿ ಆದೇಶಿಸಲಾಗಿತ್ತು.
ಆದರೆ, ಇಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಕರ್ನಾಟಕ ರಾಜ್ಯ ಪ್ರಾಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿಿರುವ ಸಾಮಾಜಿಕ, ಆರ್ಥಿಕ, ಜಾತಿ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಪೂರ್ಣಗೊಳ್ಳಲು ದಸರಾ ರಜೆ 10 ದಿನಗಳ ಕಾಲ ವಿಸ್ತರಿಸಬೇಕೆಂದು ಮನವಿ ಮಾಡಿದರು.
ಈ ಹಿನ್ನೆೆಲೆಯಲ್ಲಿ ಶಿಕ್ಷಣ ಇಲಾಖೆಯ ಸಭೆ ಕರೆದ ಸಿಎಂ ಸಿದ್ದರಾಮಯ್ಯ ಸಮೀಕ್ಷೆಯ ಸ್ಥಿಿತಿ ಗತಿ ಕುರಿತಂತೆ ಅಧಿಕಾರಿಗಳ ಜೊತೆ ಚರ್ಚಿಸಿದರು. ಬಳಿಕ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಇನ್ನೂ ಪೂರ್ಣಗೊಂಡಿಲ್ಲದ ಕಾರಣ ಅ.18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಶಿಕ್ಷಕರ ಸಂಘದ ಮನವಿಯಂತೆ ರಜೆ ವಿಸ್ತರಣೆ ಮಾಡಿದ್ದು, ಅ. 19 ರೊಳಗೆ ಸಮೀಕ್ಷೆ ಮುಗಿಯಲಿದೆ ಎಂದರು.
ಸೆ.2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗದ ಜೊತೆ ಚರ್ಚೆ ನಡೆಸಲಾಗಿದೆ. 1.20 ಲಕ್ಷ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೇಳಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ 8 ಶಾಲಾ ದಿನಗಳಿಗೆ ರಜೆ ಘೋಷಿಸಿದ್ದೇವೆ ಎಂದ ಅವರು, ಇದೇ 12ರಿಂದ ದ್ವಿಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಾಸಕರಿಗೆ ವಿನಾಯ್ತಿಿ ನೀಡಲಾಗಿದೆ ಎಂದರು.
ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿಿನ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ದೀಪಾವಳಿಯೊಳಗೆ ಬೆಂಗಳೂರು ಪೂರ್ಣ:
ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ದೀಪಾವಳಿಯ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದರು.
ಬೆಂಗಳೂರಿನ ಕೆಲ ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ ಜಿಬಿಎ ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ಹೇಳಿದರು.
ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್, ಶಾಸಕರಾದ ಪೊನ್ನಣ್ಣ, ಅಶೋಕ್ ರೈ, ಎಂಎಲ್ಸಿಿ ಪುಟ್ಟಣ್ಣ, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಾಣ ಇಲಾಖೆ ಕಾರ್ಯದರ್ಶಿ ತುಳಸಿ ಮದಿನೇನಿ, ಆಯುಕ್ತ ಎಸ್ ಎ ದಯಾನಂದ್, ಬೆಂಗಳೂರು ನಗರಾಭಿವೃದ್ಧಿಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಡಾ ಮಹೇಶ್ವರ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗೀಲ್ ಮತ್ತಿಿತರರು ಭಾಗವಹಿಸಿದ್ದರು.
ಸಮೀಕ್ಷೆ ಇನ್ನೂ ಪ್ರಗತಿಯಲ್ಲಿರುವುದರಿಂದ ಸರ್ಕಾರಿ ಶಾಲಾ ಶಿಕ್ಷಕರಿಗೆ ಕನಿಷ್ಠ 10 ದಿನಗಳ ಕಾಲ ರಜೆ ನೀಡಬೇಕೆಂದು ಮನವಿ ಮಾಡಲಾಯಿತು. ಸಮೀಕ್ಷೆದಾರರ ಶಾಲೆ ಒಂದು ಕಡೆಯಿಂದ, ಸಮೀಕ್ಷೆ ನಡೆಯುವ ಸ್ಥಳ ಮತ್ತೊೊಂದೆಡೆ ಇದೆ. ಹೀಗಾಗಿ ಎರಡೂ ಕಾರ್ಯ ಒಟ್ಟಿಿಗೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ಮನವರಿಕೆ ಮಾಡಲಾಯಿತು. ನಮ್ಮ ಮನವಿಗೆ ಸಿಎಂ, ಡಿಸಿಎಂ, ಶಿಕ್ಷಣ ಸಚಿವರು ಸ್ಪಂದಿಸಿದ್ದಕ್ಕಾಾಗಿ ಅಭಿನಂದನೆಗಳು.
-ಚಂದ್ರಶೇಖರ ನುಗ್ಗಲಿ, ಅಧ್ಯಕ್ಷರು, ರಾಜ್ಯ ಪ್ರಾಾಥಮಿಕ ಶಾಲಾ ಶಿಕ್ಷಕರ ಸಂಘ

