ಸುದ್ದಿಮೂಲವಾರ್ತೆ
ಕೊಪ್ಪಳ,ಜು.27: ಗ್ರಾಮೀಣ ಕುಡಿವ ನೀರು ಹಾಗು ಜೆಜೆಎಂ ಕಾಮಗಾರಿಗಳ ಕುರಿತು ಜಿ.ಪಂ ಸಿಇಓ ರಾಹುಲ್ ರತ್ನಂ ಪಾಂಡೆಯರವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ಜರುಗಿತು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಯೋಜನೆಯಡಿ ಬರುವ ಜಲ ಜೀವನ್ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ರಚಿಸಲಾದ ಹೊಬಳಿಮಟ್ಟದ ತನಿಖಾಧಿಕಾರಿಗಳ ತಂಡದವರು ಬ್ಯಾಚ್-1, ಬ್ಯಾಚ್-2 ಕಾಮಗಾರಿಗಳಿಗೆ ಸಂಬಂದಿಸಿದಂತೆ ಒದಗಿಸಲಾದ ಚೆಕ್-ಲಿಸ್ಟ ಅನುಸಾರ ಕಾಮಗಾರಿಗಳನ್ನು ಪರಿಶೀಲನೆ ಮಾಡಲು ತಿಳಿಸಿದರು.
ಮುಂದಿನ ವಾರಂದಿದ ಪ್ರತಿ ವಿಧಾನಸಭಾ ಕ್ಷೇತ್ರವಾರು ಶಾಸಕರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆಗಳನ್ನು ಜರುಗಿಸಲು ಕ್ರಮವಹಿಸುವಂತೆ ಇಂಜನೀಯರ್ ಗಳಿಗೆ ತಿಳಿಸಿದರು.
ವಿಧಾನಸಭಾ ಕ್ಷೇತ್ರವಾರು ಜರುಗುವ ಸಭೆಗಳಲ್ಲಿ ನಿಗದಿತ ನಮೂನೆಯಲ್ಲಿ ವರದಿ ತಯಾರಿಸಿ ಸಭೆಯಲ್ಲಿ ಮಂಡಿಸಲು ತಿಳಿಸಿದರು.
ಗ್ರಾಮೀಣ ಭಾಗದ ಕುಡಿಯುವ ನೀರಿನ ಕಾಮಗಾರಿಗಳಿಗೆ ಪ್ರತಿವಿಧಾನಸಭೆಗೆ ರೂ. 50 ಲಕ್ಷಗಳ ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು.
ಪರಿಶೀಲನಾ ತಂಡದವರು ಪರಿಶೀಲನೆ ಮಾಡಿದ ಕಾಮಗಾರಿಗಳ ಛಾಯಾಚಿತ್ರಗಳನ್ನು ಸಂಗ್ರಹಿಸಲು ತಿಳಿಸಿದರು.
ಸಭೆಯಲ್ಲಿ ಗ್ರಾ.ಕು.ನೀ & ನೈ ಇಲಾಖೆ ಕೊಪ್ಪಳ ವಿಭಾಗದ ಅಧಿಕಾರಿಗಳು ಹಾಗೂ ಜಿಲ್ಲೆ ಎಲ್ಲಾ ಇಂಜೀಯರ್ ಗಳು ಮತ್ತು ಹೊಬಳಿಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.