ಸುದ್ದಿಮೂಲ ವಾರ್ತೆ
ಮೈಸೂರು,ಜೂ.12:ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.
ನಿಲುವಾಗಿಲು ಗ್ರಾಮ ಪಂಚಾಯ್ತಿ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಪತ್ನಿ,ತಾಯಿ ಹಾಗೂ ಪುತ್ರ ತೀವ್ರವಾಗಿ ಗಾಯಗೊಂಡಿದ್ದಾರೆ. ಭಾಸ್ಕರ್ ಕಾರು ಚಾಲನೆ ಮಾಡುತ್ತಿದ್ದರು.
ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಹುಣಸೂರು ಸಾರಿಗೆ ಸಂಸ್ಥೆ ಡಿಪೋ ಮ್ಯಾನೇಜರ್ ಮತ್ತು ಬಿಳಿಕೆರೆ ಪೊಲೀಸ್ ಠಾಣೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ
ನಡೆಸಿದರು.