ಸುದ್ದಿಮೂಲ ವಾರ್ತೆ ಬೆಂಗಳೂರು, ಅ.09:
ಬೀದರ್ ಜಿಲ್ಲೆ ಬಸವಕಲ್ಯಾಾಣದಲ್ಲಿ ನಿರ್ಮಾಣವಾಗುತ್ತಿಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಸಂಬಂಧಿಸಿದಂತೆ 50 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಈ ವಿಷಯ ತಿಳಿಸಿದ ಸಚಿವರು, ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ಬಸವಕಲ್ಯಾಾಣಕ್ಕೆೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2026ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದ್ದು, ಕಾಮಗಾರಿ ಭರದಿಂದ ಸಾಗಿದೆ. ಗುತ್ತಿಿಗೆದಾರರಿಗೆ ಸುಮಾರು 73 ಕೋಟಿ ರೂ. ಹಣ ಪಾವತಿ ಆಗಬೇಕಿದ್ದು, ಈ ಪೈಕಿ ಇಂದು 50 ಕೋಟಿ ರೂ. ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಿಗಳು ಹಾಗೂ ಕಂದಾಯ ಸಚಿವರಿಗೆ ತಾವು ಮಾಡಿದ ಮನವಿಯ ಮೇರೆಗೆ ಈಗ ಹಣ ಬಿಡುಗಡೆಯಾಗಿದ್ದು, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ, ಮುಂದಿನ ವರ್ಷ ಲೋಕಾರ್ಪಣೆ ಮಾಡಲು ಪ್ರಯತ್ನಿಿಸಲಾಗುವುದು ಎಂದು ತಿಳಿಸಿದ್ದಾರೆ.
770 ಅಮರಗಣಂಗಳ ವಚನ:
ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಅನುಭವ ಮಂಟಪ ಭವ್ಯ, ದಿವ್ಯವಾಗಿ ನಿರ್ಮಾಣವಾಗುತ್ತಿಿದ್ದು, ಬಸವಾದಿ ಶರಣರ ಕೊಡುಗೆಯನ್ನು ಇಡೀ ವಿಶ್ವಕ್ಕೇ ಸಾರಲಿದೆ. ಇಷ್ಟಲಿಂಗ ಪೂಜೆಯ ವೈಜ್ಞಾನಿಕ ಅಂಶಗಳೂ ಇಲ್ಲಿದ್ದು, ಜಗತ್ತಿಿನಾದ್ಯಂತದ ಪ್ರವಾಸಿಗರನ್ನು ತನ್ನತ್ತ ಸೆಳೆಯಲಿದೆ ಎಂದರು.
ಆಧುನಿಕ ಅನುಭವ ಮಂಟಪದಲ್ಲಿರುವ 770 ಕಂಬಗಳ ಮೇಲೆ 770 ಅಮರ ಗಣಂಗಳ ವಚನಗಳನ್ನು ಕೆತ್ತಲಾಗಿದೆ ಎಂದ ಈಶ್ವರ ಖಂಡ್ರೆೆ, ಕಾಮಗಾರಿಗಾಗಿ ಅಗತ್ಯ ಹಣ ಬಿಡುಗಡೆ ಮಾಡುತ್ತಿಿರುವ ಮುಖ್ಯಮಂತ್ರಿಿ ಸಿದ್ದರಾಮಯ್ಯನವರಿಗೆ ಧನ್ಯವಾ
ಅನುಭವ ಮಂಟಪ ಕಾಮಗಾರಿಗೆ 50 ಕೋಟಿ ರೂ. ಬಿಡುಗಡೆ- ಈಶ್ವರ ಖಂಡ್ರೆೆ
