ಬೆಂಗಳೂರು, ಮೇ 20 : ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಸದನದ ಅತ್ಯಂತ ಹಿರಿಯ ಸದಸ್ಯ ಆರ್ ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ( ಪ್ರೊ ಟರ್ಮ್ ಸ್ಪೀಕರ್ ಆಗಿ ) ಕಾರ್ಯ ನಿರ್ವಹಿಸುವಂತೆ ವಿನಂತಿಸಲಾಗಿದ್ದು ಸೋಮವಾರವೇ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಪ್ರಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸನ್ನಿಹಿತದಲ್ಲಿಯೇ ಪುನರಾರಂಭ ಮಾಡಲಾಗುವುದು ಎಂದೂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಘೋಷಿಸಿದರು.