ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.11:
ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿ, ಕಳೆದ 2022 ಕ್ಕೂ ಮುನ್ನ ನಗರ ಸ್ಥಳೀಯ ಸಂಸ್ಥೆೆಗಳ ಪೌರಕಾರ್ಮಿಕರಿಗೆ ಎಸ್ಎ್ಸಿ ಅನುದಾನದಡಿ ವೇತನ ಪಾವತಿಸಲಾಗುತ್ತಿಿತ್ತು. ಆದರೆ ಸ್ಥಳೀಯ ಸಂಸ್ಥೆೆಗಳು ಉತ್ತಮವಾಗಿ ತೆರಿಗೆ ಸಂಗ್ರಹಿಸಿ, ಆತ್ಮ ನಿರ್ಭರವಾಗಬೇಕು, ಆರ್ಥಿಕವಾಗಿ ಸಬಲತೆಯನ್ನು ಸಾಧಿಸಬೇಕು ಎಂಬ ಉದ್ದೇಶದಿಂದ ಶೇ.40 ರಷ್ಟು ಸರ್ಕಾರದಿಂದ ಹಾಗೂ ಶೇ.60 ರಷ್ಟು ನಗರ ಸ್ಥಳೀಯ ಸಂಸ್ಥೆೆಗಳೇ ತಮ್ಮ ಆದಾಯದ ಅನುದಾನದಿಂದ ಪಾವತಿಸುವಂತೆ ಸೂಚನೆ ನೀಡಲಾಗಿರುತ್ತದೆ ಎಂದರು.
ಶಾಸಕ ಸಿದ್ದು ಸವದಿ ಅವರು ಪ್ರತಿಕ್ರಿಿಯಿಸಿ, ನಗರ, ಸ್ಥಳೀಯ ಸಂಸ್ಥೆೆಗಳಿಗೆ ಸ್ವಚ್ಛತೆ, ರಸ್ತೆೆ, ಚರಂಡಿ, ಸೇತುವೆ ಮುಂತಾದ ಕಾಮಗಾರಿಗಳಿಗೆ ಅನುದಾನದ ಅವಶ್ಯಕತೆ ಹೆಚ್ಚಿಿರುತ್ತದೆ, ಅಲ್ಲದೆ ತೆರಿಗೆ ಸಂಗ್ರಹ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು, ಇವೆಲ್ಲವನ್ನೂ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಯಾಗಬೇಕು ಎಂದು ಒತ್ತಾಾಯಿಸಿದರು. ಈ ಕುರಿತಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಹೀಂ ಖಾನ್ ಭರವಸೆ ನೀಡಿದರು.
ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ: ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ

