ಸುದ್ದಿಮೂಲ ವಾರ್ತೆ
ಮೈಸೂರು, ಮೇ 23: ಜಿಲ್ಲೆಯಲ್ಲಿ ಮೇ 23 ರಿಂದ ಜೂ.3 ರವರೆಗೆ (ರಜಾ ದಿನಗಳನ್ನು ಹೊರತು ಪಡಿಸಿ) ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷೆಗಳು ಪ್ರಾರಂಭವಾಗುವ ಅರ್ಧ ಗಂಟೆ ಮುಂಚಿತವಾಗಿ ಮತ್ತು ಪರೀಕ್ಷಾ ಅವಧಿ ಮುಗಿಯುವವರೆಗೆ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ ಅವರು ಆದೇಶಿಸಿದ್ದಾರೆ.
ಈ ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷಾ ಸಿಬ್ಬಂದಿಗೆ ಅನ್ವಯಿಸುವುದಿಲ್ಲ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಲು ಮತ್ತು ಸುತ್ತಮುತ್ತಲಿರುವ ಕಾಪೀಯರ್ (ಜೆರಾಕ್ಸ್) ಅಂಗಡಿಗಳನ್ನು ಮುಚ್ಚಿಸಲು ನಗರದ ಪೊಲೀಸ್ ಅಧೀಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.