ಸುದ್ದಿಮೂಲ ವಾರ್ತೆ
ಯಲಬುರ್ಗಾ,ಮೇ 31 : ರೈತರಿಗೆ ಪ್ರಸಕ್ತ ವರ್ಷ ಸಕಾಲದಲ್ಲಿ ಬಿತ್ತನೆ ಬೀಜ ಮತ್ತು ರಸ ಗೊಬ್ಬರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲು ಕೃಷಿ ಇಲಾಖೆಯ ಆಯುಕ್ತರಿಗೆ ದೂರವಾಣಿ ಮೂಲಕ ನನ್ನ ತಾಲೂಕಿನ ರೈತರ ಮುಂದೆ ನಾನು ಕುಂತಿದ್ದೇನೆ ರೈತರಿಗೆ ರಸ ಗೊಬ್ಬರ ಬೇಡಿಕೆ ಆಗಿದ್ದು ತಾವುಗಳು ನಮ್ಮ ತಾಲೂಕಿಗೆ ತೊಂದರೆ ಆಗದ ಹಾಗೆ ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕ ಬಸರಾಜ್ ರಾಯರೆಡ್ಡಿ ತಿಳಿಸಿದರು.
ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿನ ರಿಯಾಯಿತಿ ದರದ ಬಿತ್ತನೆ ಬೀಜ ವಿತರಣೆ ಮಾಡಿ ಅವರು ಮಾತನಾಡಿದರು. ಈ ವರ್ಷ ಮುಂಗಾರು ಹಾಗೂ ಹಿಂಗಾರು ಬಿತ್ತನೆಗೆ ರೈತರಿಗೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ದಾಸ್ತಾನು ಮಾಡಲು ಅಧಿಕಾರಿಗಳಿಗೆ ತಿಳಿಸಿದರು.ರೈತರು ಗುಣಮಟ್ಟದ ಬಿತ್ತನೆ ಬೀಜಗಳನ್ನು ಆಯ್ಕೆಮಾಡಿಕೊಳ್ಳಬೇಕು.
ಸರ್ಕಾರದಿಂದ ವಿತರಿಸುವ ಪ್ರಮಾಣೀಕೃತ ಮಾನ್ಯತೆ ಪಡೆದ ಉತ್ತಮ ಗುಣಮಟ್ಟದ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿದರೆ ಉತ್ತಮ ಇಳುವರಿ ಪಡೆಯಲು ಸಾಧ್ಯ ಎಂದು ರೈತರಿಗೆ ಸಲಹೆ ನೀಡಿದರು. ಕಳಪೆ ಬಿತ್ತನೆ ಬೀಜ ರೈತರಿಗೆ ವಿತರಣೆ ಮಾಡಬಾರದು ಏನಾದರೂ ನನ್ನ ಕ್ಷೇತ್ರದಲ್ಲಿ ಕಳಪೆ ಬಿತ್ತನೆ ಬೀಜ ವಿತರಣೆ ಆದಲ್ಲಿ. ಸರಬರಾಜು ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸುತ್ತೇನೆ.
ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ಮಧ್ಯವರ್ತಿಗಳ ಹಾವಳಿ ಆಗದ ಹಾಗೆ ನೋಡಿಕೊಳ್ಳಬೇಕು. ಸರ್ಕಾರದಿಂದ ಸಿಗುವಂತಹ ಎಲ್ಲ ಯೋಜನೆಗಳನ್ನು ರೈತರಿಗೆ ಪ್ರಾಮಾಣಿಕವಾಗಿ ಅಧಿಕಾರಿಗಳು ಮುಟ್ಟಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕೊಪ್ಪಳ ಜಿಲ್ಲಾ ಕೃಷಿ ಇಲಾಖೆ ಚಂಟಿ ನಿರ್ದೇಶಕ ರುದ್ರೇಶ್ ಮಾತನಾಡಿ, ಈ ವರ್ಷ ಕೆಲವು ದೇಶಗಳಲ್ಲಿ ಯುದ್ಧ ನಡೆದಿದ್ದರಿಂದ ರಸಗೊಬ್ಬರ ಸರಬರಾಜುನಲ್ಲಿ ತೊಂದರೆ ಆಗಿದ್ದು ಈ ವರ್ಷ ಇದನ್ನು ಸರಿಪಡಿಸಲು ಸರ್ಕಾರ ಕಾಳಜಿ ವಹಿಸಬಹುದು ಎಂದರು.
ಈ ಸಂದರ್ಭದಲ್ಲಿ. ಸಹಾಯಕ ಕೃಷಿ ನಿರ್ದೇಶಕ ಪ್ರಾಣೇಶ್ ಅಭಿಮಾನಿ. ಕೃಷಿ ಅಧಿಕಾರಿ. ಶಿವಪ್ಪ ಕೊಂಡಗುರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಉಳ್ಳಾಗಡ್ಡಿ. ಶರಣಪ್ಪ ಗಾಂಜಿ. ಸಿಎಂ ಈಶ್ವರ ಹಟಮಾಳಾಗಿ. ಹುಲಗಪ್ಪ ವಜ್ರಬಂಡಿ. ಷಣ್ಮುಖಪ್ಪ ರಾಂಪುರ್. ಸಿದ್ದಪ್ಪ ಹಕ್ಕಿಗೂಣಿ. ಇದ್ದರು
ನನ್ನ ಕ್ಷೇತ್ರದ ರೈತರಿಗೆ ಸರ್ಕಾರದಿಂದ ಸಿಗುವಂತಹ ಎಲ್ಲಾ ಯೋಜನೆಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಇಲ್ಲ ಎಲ್ಲಾ ರೈತರು ನೇರವಾಗಿ ಅಧಿಕಾರಿಗಳನ್ನು ಭೇಟಿಯಾಗಿ ಯಾವುದೇ ಇಲಾಖೆಯಲ್ಲಿ ಕೃಷಿಗೆ ಸಂಬಂಧಪಟ್ಟ ವಸ್ತುಗಳು ಕಳಪೆ ಗುಣಮಟ್ಟ ಆಗಿದ್ದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ ಸರಬರಾಜು ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ನನ್ನ ಕ್ಷೇತ್ರದಲ್ಲಿ ಯಾವುದೇ ರೈತರಿಗೆ ತೊಂದರೆ ಆಗದ ಹಾಗೆ ನಾನು ಪ್ರಾಮಾಣಿಕ ಕೆಲಸ ಮಾಡುತ್ತೇನೆ