ಸುದ್ದಿಮೂಲ ವಾರ್ತೆ
ಸಿರುಗುಪ್ಪ. ಅ-31; ಇತ್ತೀಚಿಗೆ ತುಮಕೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಒಕೂಟದಲ್ಲಿ ಸಿರುಗುಪ್ಪ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಪ್ರೊಸಸ್ ಸರ್ವರ್ ಆಗಿ ಕಾರ್ಯ ನಿರ್ಗವಹಿಸುತ್ತಿರುವ ಟಿ ಸ್ವಾಮಿ ಇವರು 74 ಕೆ.ಜಿ ಕುಸ್ತಿ ವಿಭಾಗದಲ್ಲಿ ಸತತ 7ನೇ ಬಾರಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನಸಾಬ ಯಾದವಾಡ ಇವರು ಈ ಸಾಧನೆಗಾಗಿ ಇವರನ್ನು ಸನ್ಮಾನಿಸಿ, ರಾಷ್ಟ್ರ ಮಟ್ಟದಲ್ಲಿ ಇನ್ನು ಹೆಚ್ಚಿನ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನ್ಯಾಯಾಲಯದ ನೌಕರರು ಹಾಜರಿದ್ದರು.