ಸುದ್ದಿಮೂಲ ವಾರ್ತೆ
ಮಾಲೂರು, ಜು 19 : ಚಿಕ್ಕತಿರುಪತಿ ಪ್ರಾಥಮಿಕ ಕೃಷಿಪತ್ತಿನ ಸೇವಾ ಸಹಕಾರ ಸಂಘದ ಐದು ವರ್ಷಗಳ ಆಡಳಿತ ಅವಧಿಗೆ ಅಧ್ಯಕ್ಷರಾಗಿ ಮಂಜುನಾಥ್. ವಿ ಉಪಾಧ್ಯಕ್ಷರಾಗಿ ಮಂಜಳ.ವಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಬಾಲಕೃಷ್ಣಪ್ಪ ಘೋಷಣೆ ಮಾಡಿದ್ದಾರೆ.
ತಾಲ್ಲೂಕಿನ ಲಕ್ಕೂರು ಹೋಬಳಿ ಚಿಕ್ಕತಿರುಪತಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಿಗದಿಪಡಿಸಿದ್ದು ಅದರಂತೆ ಚುನಾವಣೆ ಕಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್ ವಿ ಉಪಾಧ್ಯಕ್ಷರ ಸ್ಥಾನಕ್ಕೆ ಮಹಿಳಾ ಮೀಸಲಾತಿಯ ಮಂಜುಳಾ ವಿ ರವರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾವ ಅಭ್ಯರ್ಥಿಯು ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ವಿ.ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಮಂಜುಳಾ .ವಿ ರವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ತಿಳಿಸಿದರು.
ನೂತನ ಅಧ್ಯಕ್ಷ ವಿ ಮಂಜುನಾಥ್ ಮಾತನಾಡಿ, ಶಾಸಕ ಕೆ ವೈ ನಂಜೇಗೌಡರ ಸಹಕಾರದಿಂದ ಮತ್ತು ನಿರ್ದೇಶಕರು ಹಾಗೂ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಗಳು ಕಾಂಗ್ರೆಸ್ ಪಕ್ಷದ ಬೆಂಬಲಿತವಾಗಿದ್ದು. ಮುಂದಿನ ದಿನಗಳಲ್ಲಿ ಸಹಕಾರ ಹೆಚ್ಚಿನ ಸಾಲ ಸೌಲಭ್ಯ ಒದಗಿಸಿ ಆರ್ಥಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ತರುವುದರ ಜೊತೆಗೆ ಎಲ್ಲಾ ನಿರ್ದೇಶಕರ ಸಹಕಾರ ಪಡೆದು ಪ್ರಾಮಾಣಿಕವಾಗಿ ಅಭಿವೃದ್ಧಿಪಡಿಸುವಲ್ಲಿ ಶ್ರಮಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಕುಮಾರ್, ಕನಕರಾಜು, ಶಂಕನಾರಾಯಣಗೌಡ, ಚಿಕ್ಕಮ್ಮಯ, ಮುನಿವೇಲು, ಅರುಣ್ ಕುಮಾರ್, ಮುಖಂಡರಾದ ಎ.ಎಂ ನಾರಾಯಣಪ್ಪ, ರಾಮ್ ಪ್ರಸಾದ್, ಭವಾನಿ ಶಂಕರ್, ಟಿಸಿ ಮಂಜುನಾಥ್, ರಾಘವೇಂದ್ರ ಪ್ರಸಾದ್, ಸಂದೀಪ್, ಡಿ ಸಿ ಸಿ ಬ್ಯಾಂಕ್ ವ್ಯವಸ್ಥಾಪಕ ಕೃಷ್ಣಪ್ಪ, ಸಿಇಒ ಶಿವಶಂಕರ್ ಸೇರಿದಂತೆ ಇನ್ನಿತರರು ಇದ್ದರು.