ಸುದ್ದಿಮೂಲ ವಾರ್ತೆ
ಬೆಂಗಳೂರು,ಏ.11: ಬಿಜೆಪಿ ಪಟ್ಟಿ ಬಿಡುಗಡೆಗೆ ಕೆಲವೆ ಗಂಟೆಗಳು ಬಾಕಿ ಇರುವಾಗಲೇ ಕೆ.ಎಸ್ ಈಶ್ವರಪ್ಪ ಅವರು ರಾಜಕೀಯ ಕ್ಷೇತ್ರಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪ ವಿರುವಾಗಲೇ ಅವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆಯುವುದರ ಮೂಲಕ ಸ್ವಯಂ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸ್ವಯಂ ನಿವೃತ್ತಿ ಘೋಷಣೆ ಮಾಡಿದ ಅವರು,ಈ ಬಗ್ಗೆ ಕುರಿತು ಅವರು ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣೆನೆಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.
ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ.