ಸುದ್ದಿಮೂಲ ವಾರ್ತೆ
ಮೈಸೂರು, ಅ.5:ಕಾಂಗ್ರೆಸ್ನ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಸಮಾಜದ ಅಧಿಕಾರಿಗಳಿಗೆ ಆಯಕಟ್ಟಿನ ಸ್ಥಾನಮಾನ ಕೊಟ್ಟಿಲ್ಲ ಎಂಬ ಹೇಳಿಕೆಗೆ ಕಾಂಗ್ರೆಸ್ ಮಾಜಿ ಮಹಾಪೌರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುರುವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್ಗಳಾದ ನರಸಿಂಹ ಅಯ್ಯಂಗಾರ್, ಟಿ.ಬಿ.ಚಿಕ್ಕಣ್ಣ. ಮೋದಾಮಣಿ, ಬಿ.ಕೆ.ಪ್ರಕಾಶ್, ನಾಗಭೂಷಣ್ ಅವರುಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಸವಣ್ಣನವರ ಅನುಯಾಯಿಯಾಗಿದ್ದಾರೆ. ಹಾಗಾಗಿ ಎಲ್ಲೂ ಕೂಡ ಜಾತಿ ರಾಜಕಾರಣ ಮಾಡಿಲ್ಲ ಎಂದು ವಾದಿಸಿದರು.
ಸರ್ಕಾರ ಬಂದು ನಾಲ್ಕು ತಿಂಗಳಾಗಿಲ್ಲ, ಹಿಂದಿನ ಸರ್ಕಾರ ನೇಮಕ ಮಾಡಿರುವ ಅಧಿಕಾರಿಗಳೇ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಈ ರೀತಿ ಆರೋಪ ಮಾಡುವುದು ಸಮಂಜಸವಲ್ಲ. ಸಿದ್ದರಾಮಯ್ಯ ಕೇವಲ ಒಂದು ಜಾತಿಗೆ ಸೀಮಿತವಾದ ನಾಯಕ ಅಲ್ಲ. ಅವರೊಬ್ಬ ಜಾತ್ಯಾತೀತ ನಾಯಕರೆಂದರು.
ಕಾಂಗ್ರೆಸ್ ಮುಖಂಡ ಭಾಸ್ಕರ್ ಕಂಠಿಗೌಗೌಡ, ತಿವಾರಿ ಇದ್ದರು.