ಸುದ್ದಿಮೂಲ ವಾರ್ತೆ
ನವದೆಹಲಿ, ಮೇ 26: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ನವದೆಹಲಿಯಲ್ಲಿ ಪ್ರತ್ಯೇಕವಾಗಿ ಸೋನಿಯಾಗಾಂಧಿ ಮತ್ತು ರಾಹುಲ್ಗಾಂಧಿ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಉಭಯ ಮುಖಂಡರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ತಮ್ಮ ಕೃತಜ್ಞತೆ ಸಲ್ಲಿಸಿದ್ದಲ್ಲದೆ, ಪ್ರಸ್ತುತ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಹಾಗೂ ಚುನಾವಣಾ ಸಂದರ್ಭದಲ್ಲಿ ನೀಡಿದ ಐದು ಗ್ಯಾರಂಟಿಗಳ ಅನುಷ್ಠಾನ ಕುರಿತು ಸಹ ಚರ್ಚೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಪ್ರವಾಸದಲ್ಲಿದ್ದ ಸೋನಿಯಾಗಾಂಧಿ ಅವರನ್ನು ಖುದ್ದಾಗಿ ಭೇಟಿ ಮಾಡಲು ಆಗದ ಕಾರಣ ಅಧಿಕಾರ ಸ್ವೀಕರಿಸಿದ ಹಾಗೂ ಸಂಪುಟ ವಿಸ್ತರಣೆ ಬಳಿಕ ಇಂದು ಭೇಟಿ ಮಾಡಿದ್ದಾರೆ.