ಸುದ್ದಿಮೂಲ ವಾರ್ತೆ ಹಾವೇರಿ, ಜ.07:
ಜನರ ಆಶೀರ್ವಾದದಿಂದ ಇಲ್ಲಿವರೆಗೂ ಬಂದಿದ್ದೀನಿ. ಇನ್ನೂ ಎಷ್ಟು ದಿನ ಇರ್ತೀವೋ ಗೊತ್ತಿಿಲ್ಲ. ನನ್ನ ಆಡಳಿತ ತೃಪ್ತಿಿಯಿದೆ’ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ಹಾವೇರಿಯ ಕೊಳ್ಳಿಿ ಪಾಲಿಟೆಕ್ನಿಿಕ್ ಆವರಣದ ಹೆಲಿಪ್ಯಾಾಡ್ನಲ್ಲಿ ಬುಧವಾರ ಮಾತನಾಡಿದ ಅವರು, ಜನರ ಆಶೀರ್ವಾದ ಇದ್ದರೆ ಮಾತ್ರ ಇಲ್ಲಿವರೆಗೆ ಬರಲು ಸಾಧ್ಯ. ನನ್ನ ಇದುವರೆಗಿನ ಆಡಳಿತ ತೃಪ್ತಿಿ ತಂದಿದೆ ಎಂದು ಹೇಳಿದರು.
ಪೂರ್ಣಾವಧಿ ಅಧಿಕಾರ ಪೂರೈಸ್ತೀರಾ ಎಂಬ ಪ್ರಶ್ನೆೆಗೆ ಪ್ರತಿಕ್ರಿಿಯಿಸಿ, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋೋ ಅದಕ್ಕೆೆ ಬದ್ಧ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಸಿದ್ದರಾಮಯ್ಯ ಅವರ ಸರ್ಕಾರ ಬೊಕ್ಕಸ ಖಾಲಿ ಮಾಡಿದೆ ಎಂದು ಬಿಜೆಪಿಯವರು ಮಾಡಿರುವ ಟೀಕೆಗಳಿಗೆ ಪ್ರತಿಕ್ರಿಿಯೆ ನೀಡಿದ ಮುಖ್ಯಮಂತ್ರಿಿಗಳು ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು.
ಕೇಂದ್ರ ಸರ್ಕಾರವೇ ಜಿಎಸ್.ಟಿ ಜಾರಿಗೆ ತಂದು ಎಂಟು ವರ್ಷ ಶೇ.24 ರಷ್ಟು ತೆರಿಗೆ ಸುಲಿಗೆ ಮಾಡಿ ನಂತರ ನಾವು ತೆರಿಗೆ ಕಡಿಮೆ ಮಾಡಿದ್ದೇವೆ ಎಂದರು. ಕರ್ನಾಟಕ ರಾಜ್ಯವೊಂದಕ್ಕೆೆ ಒಂದು ವರ್ಷಕ್ಕೆೆ 10 ರಿಂದ 12 ಸಾವಿರ ಕೋಟಿ ರೂ.ಕಡಿಮೆಯಾಗಿದೆ. ಈ ವರ್ಷ 5 ರಿಂದ 6 ಸಾವಿರ ಕೋಟಿ ನಷ್ಟವಾಗುತ್ತದೆ. ಇದಕ್ಕೆೆಲ್ಲ ಯಾರು ಹೊಣೆ ಎಂದರು.
ನಾಲ್ಕೂವರೆ ಲಕ್ಷ ಕೋಟಿ ತೆರಿಗೆ ನಾವು ಕೊಡುತ್ತೇವೆ. ನಮಗೆ ಕೊಡುವುದು 60ರಿಂದ 70 ಸಾವಿರ ಕೋಟಿ ಮಾತ್ರ. ಒಂದು ರೂ ಕೊಟ್ಟರೆ 14 ಪೈಸೆ ವಾಪಸ್ಸು ಬರುತ್ತದೆ. ಭದ್ರಾಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡಲಿಲ್ಲ. 5495 ಕೋಟಿ ರಾಜ್ಯಕ್ಕೆೆ ಒದಗಿಸಲು 15 ನೇ ಹಣಕಾಸು ಆಯೋಗ ಶಿಾರಸು ಮಾಡಿತ್ತು. ಅದನ್ನೂ ಕೊಡಲಿಲ್ಲ. ಪೆರಿೆರಲ್ ರಿಂಗ್ ರೋಡಿಗೆ 3000 ಕೋಟಿ, ಬೆಂಗಳೂರಿನ ಕೆರೆಯ ಅಭಿವೃದ್ಧಿಿಗೆ 3000 ಕೋಟಿ ಕೊಡಲಿಲ್ಲ. ಏನೂ ಕೊಡಲಿಲ್ಲ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ವೈದ್ಯಕೀಯ ಕಾಲೇಜನ್ನು ಏಕೆ ಪೂರ್ಣಗೊಳಿಸಲಿಲ್ಲ? ಇದನ್ನು ನಾವು ಅಧಿಕಾರಕ್ಕೆೆ ಬಂದು ಪೂರ್ಣಗೊಳಿಸಿದ್ದೇವೆ ಎಂದರು.
ಬಳ್ಳಾಾರಿ ಪ್ರಕರಣ:
ಬಳ್ಳಾಾರಿ ಪ್ರಕರಣವನ್ನು ಸಿಬಿಐಗೆ ಹಸ್ತಾಾಂತರ ಮಾಡಬೇಕೆಂದು ಜನಾರ್ದನ ರೆಡ್ಡಿಿ ಶ್ರೀರಾಮುಲು ಸೇರಿದಂತೆ ಅನೇಕರು ಒತ್ತಾಾಯಿಸುತ್ತಿಿರುವ ಬಗ್ಗೆೆ ಪ್ರತಿಕ್ರಿಿಯೆ ನೀಡಿದ ಮುಖ್ಯಮಂತ್ರಿಿಗಳು ನಿನ್ನೆೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಮಾತನಾಡಿದ್ದಾರೆ. ಬಳ್ಳಾಾರಿಯಲ್ಲಿ ಗಲಾಟೆಯಾಗಿ ಒಬ್ಬ ವ್ಯಕ್ತಿಿ ಸಾಯಲು ಬ್ಯಾಾನರ್ ಬಿಚ್ಚಿಿಹಾಕಿದ್ದು ಪ್ರಚೋದನೆ. ಬಿಜೆಪಿಯವರಿಗೆ ಅಸೂಯೆ ತಡೆಯಲು ಆಗುತ್ತಿಿಲ್ಲ ಎಂದರು.
ಕಾನೂನು ಕೈಗೆತ್ತಿಿಕೊಂಡವರ ಮೇಲೆ ಕ್ರಮ
ಹುಬ್ಬಳ್ಳಿಿಯಲ್ಲಿ ಮಹಿಳೆಯ ವಿವಸಗೊಳಿಸಿರುವ ಬಗ್ಗೆೆ ಸುದ್ದಿಗಾರರ ಪ್ರಶ್ನೆೆಗೆ ಉತ್ತರಿಸಿದ ಮುಖ್ಯಮಂತ್ರಿಿಗಳು ಸುಜಾತ ಹಂಡೆ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಮಹಿಳೆಯೇ ಸ್ವತಃ ವಿವಸಗೊಂಡು ಮಹಿಳಾ ಪೊಲೀಸರನ್ನು ಕಚ್ಚಿಿದ್ದಾರೆ. ಆಕೆಯ ಮೇಲೆ ಎ್ಐಆರ್ ಆಗಿದ್ದು , ಪೊಲೀಸರು ವಿಚಾರಣೆಗೆ ಹೋಗಿದ್ದ ಸಂದರ್ಭದಲ್ಲಿ ಅವರನ್ನೇ ಕಚ್ಚಿಿದ್ದಾರೆ. ಹತ್ತು ಜನಕ್ಕೂ ಹೆಚ್ಚು ಮಹಿಳಾ ಪೊಲೀಸರಿದ್ದರು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಹಾಗೆ ಮಾಡಿದವರ ಮೇಲೆ ಕಾನೂನಿನ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೊಟ್ಟ ಮಾತಿನಂತೆ ನಡೆದುಕೊಂಡರೆ ಮಾತ್ರ ನಾಯಕರು ಎನಿಸಿಕೊಳ್ಳುತ್ತಾಾರೆ: ಡಿಕೆಶಿ
ಹಾವೇರಿ, ಜ.7: ರಾಜಕಾರಣದಲ್ಲಿ ನಾವು ಎಷ್ಟು ದಿನ ಇರುತ್ತೇವೆ ಎಂಬುದು ಮುಖ್ಯವಲ್ಲ, ಇದ್ದಷ್ಟು ದಿನ ನಾವು ಹೇಗೆ ನಡೆದುಕೊಳ್ಳುತ್ತೇವೆ, ಏನು ಮಾಡುತ್ತೇವೆ ಎಂಬುದು ಮುಖ್ಯ. ಕೊಟ್ಟ ಮಾತು ಉಳಿಸಿಕೊಳ್ಳಬೇಕು. ನುಡಿದಂತೆ ನಡೆಯಬೇಕು. ಆಗ ನಾವು ನಾಯಕರು ಎಂದು ಕರೆಸಿಕೊಳ್ಳಲು ಸಾಧ್ಯ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಹೇಳಿದರು.
ಹಾವೇರಿಯಲ್ಲಿ ಬುಧವಾರ ನಡೆದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆೆ ಉದ್ಘಾಾಟನಾ ಕಾರ್ಯಕ್ರಮ ಹಾಗೂ ವಿವಿಧ ಇಲಾಖೆಗಳ ಕಾಮಗಾರಿ ಶಿಲಾನ್ಯಾಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ’ವರ್ಡ್ ಪವರ್ ಈಸ್ ವಲ್ಡರ್ ಪವರ್’ ಎಂದು ಹೇಳಿದ್ದೆ. ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಮಾರ್ಮಿಕವಾಗಿ ಹೇಳಿದರು.
ನಮಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಸಿಗುತ್ತಿಿಲ್ಲ. ಪಾಪ, ಬೊಮ್ಮಾಾಯಿ ಅವರ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ಭದ್ರಾಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಘೋಷಣೆ ಮಾಡಿತು. ಆದರೆ ಇವತ್ತಿಿನವರೆಗೂ ಆ ಹಣ ಬಿಡುಗಡೆಯಾಗಿಲ್ಲ. ಬೊಮ್ಮಾಾಯಿ ಅವರೇ, ನಿರ್ಮಲಾ ಸೀತಾರಾಮನ್ ಹಾಗೂ ಮೋದಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆೆ ಆಗ್ರಹಿಸಿದರು.
ಎಲ್ಲಾ ಪಕ್ಷಗಳೂ ರಾಜಕಾರಣವನ್ನು ಪಕ್ಕಕ್ಕಿಿಟ್ಟು, ನಮ್ಮ ರಾಜ್ಯದ ಜನರು ಹಾಗೂ ರೈತರ ಹಿತ ಕಾಪಾಡಲು ಒಗ್ಗಟ್ಟಾಾಗಿ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕೋಣ ಎಂದು ಹೇಳಿದರು.
ಇತ್ತೀಚೆಗೆ ನಾನು ದೆಹಲಿಗೆ ಹೋಗಿ ಬೇಡ್ತಿಿ ಹಾಗೂ ವರದಾ ನದಿ ಜೋಡಣೆ ವಿಚಾರದಲ್ಲಿ ಒಪ್ಪಂದಕ್ಕೆೆ ಸಹಿ ಹಾಕಿ ಬಂದಿದ್ದೇನೆ. ಬೊಮ್ಮಾಾಯಿ ಅವರ ಮುಂದಾಳತ್ವದಲ್ಲಿ ಪ್ರಧಾನಮಂತ್ರಿಿಗಳ ಭೇಟಿಗೆ ಸಮಯ ನಿಗದಿ ಮಾಡಿ. ನಾವೂ ಬರುತ್ತೇವೆ. ಕೃಷ್ಣಾಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆೆ ಮನವಿ ಮಾಡೋಣ. ಅಗತ್ಯವಿದ್ದರೆ ನ್ಯಾಾಯಾಲಯದಲ್ಲಿರುವ ಪ್ರಕರಣಗಳನ್ನು ಹಿಂಪಡೆಯೋಣ.
ಇನ್ನು ಮಹದಾಯಿ ವಿಚಾರದಲ್ಲಿ ನ್ಯಾಾಯಾಧಿಕರಣ ತೀರ್ಪಿನ ಅನ್ವಯ ನೀರಿನ ಬಳಕೆಗೆ ಕೇಂದ್ರ ಸರ್ಕಾರದ ಅರಣ್ಯ ಇಲಾಖೆಯಿಂದ ಒಪ್ಪಿಿಗೆ ಸಿಕ್ಕರೆ ನೀವು ಮಾಡಿಕೊಂಡು ಬಂದಿರುವ ಹೋರಾಟಕ್ಕೆೆ ಮುಕ್ತಿಿ ಸಿಗುತ್ತದೆ. ಈ ಯೋಜನೆ ಸಂಬಂಧ ನಾವು ಈಗಾಗಲೇ ಟೆಂಡರ್ ಕರೆದಿದ್ದೇವೆ. ಗೋವಾ ರಾಜ್ಯದ ರಾಜಕಾರಣ ಬದಿಗಿಟ್ಟು ನಮ್ಮ ರಾಜ್ಯದ ಶಕ್ತಿಿಯನ್ನು ಪ್ರದರ್ಶಿಸಿ, ರೈತರು ಹಾಗೂ ಜನರ ಬದುಕಿನ ಬಗ್ಗೆೆ ಆಲೋಚಿಸೋಣ. ನಾವು ರಾಜಕೀಯವನ್ನು ಮುಂದಿನ ಎರಡೂವರೆ ವರ್ಷಗಳ ಬಳಿಕ ಮಾಡೋಣ. ಈಗ ರಾಜ್ಯದ ಜನರಿಗಾಗಿ ಕೃಷ್ಣ, ಮಹದಾಯಿ, ಕಾವೇರಿ ವಿಚಾರವಾಗಿ ಒಂದಾಗಿ ಕೆಲಸ ಮಾಡೋಣ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಇನ್ನೂ ಎಷ್ಟು ದಿನ ಇರ್ತೀವೋ ಗೊತ್ತಿಲ್ಲ: ಸಿದ್ದರಾಮಯ್ಯ

