ಸುದ್ದಿಮೂಲ ವಾರ್ತೆ ಮಂಡ್ಯ, ಡಿ.05:
ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿ ಅನುಸರಿಸಬೇಕು ಹಾಗೂ ಉತ್ಪಾಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿಿ ಇಲಾಖೆ, ರೇಷ್ಮೆೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಾಶ್ರಯದಲ್ಲಿ ನಗರದ ವಿ.ಸಿ ಾರಂ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿ ಮೇಳ 2025 ಸಮಗ್ರ ಕೃಷಿಯಿಂದ ಸುಸ್ಥಿಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಾಟಿಸಿದರು.
ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಾನಿಲಯ ಸ್ಥಾಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಾನಿಲಯ ಅಗತ್ಯವಿದೆ ಎಂದು ನನಗೂ ಸಹ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಾಬಿನೆಟ್ ನಲ್ಲಿ ಚರ್ಚೆ ಮಾಡಿ ಎಲ್ಲಾ ಸಚಿವರ ಒಪ್ಪಿಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಾನಿಲಯವನ್ನು ಸ್ಥಾಾಪಿಸಲಾಯಿತು ಎಂದು ಹೇಳಿದರು.
ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾಾನಿಲಯಗಳು ಅಭಿವೃದ್ಧಿಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ ಅದನ್ನು ರೈತರಿಗೆ ತಲುಪಿಸಬೇಕು ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆೆ ಇಳಿಮುಖವಾಗಿದೆ ಎಂದು ಅಭಿಪ್ರಾಾಯಪಟ್ಟರು.
ಅಂತಾರಾಷ್ಟ್ರೀಯ ಸ್ಯಾಾಂಡ್ವಿಿಚ್ ಸ್ನಾಾತಕೋತರ ಪದವಿ ಸ್ಥಾಾಪನೆಗೆ ಬೇಡಿಕೆ
ಮಂಡ್ಯ ವಿಜ್ಞಾನಿಗಳ ವಿಶ್ವವಿದ್ಯಾಾನಿಲಯದಲ್ಲಿ ಅಂತಾರಾಷ್ಟ್ರೀಯ ಸ್ಯಾಾಂಡ್ವಿಿಚ್ ಸ್ನಾಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿಿದ್ದಾರೆ ಸದರಿಯ ಸ್ನಾಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿಿದೆ, ಎಂದರು.
ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಾಲಯದ ಅಭಿವೃದ್ಧಿಿ ಪಡಿಸಿದ ಐದು ಕೃಷಿ ತಳಿಗಳನ್ನು ಮತ್ತು 9 ತಾಂತ್ರಿಿಕತೆಗಳನ್ನು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕೃಷಿ ಕ್ಯಾಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚಲುವರಾಯಸ್ವಾಾಮಿ, ರಾಜ್ಯ ಗ್ಯಾಾರಂಟಿ ಅನುಷ್ಠಾಾನ ಪ್ರಾಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮೈ ಶುರ್ಗ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಾಲಯದ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿಿ ರಘುನಂದನ್, ಎಂ.ಡಿ.ಸಿ.ಸಿ ಬ್ಯಾಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿಿತರರು ಉಪಸ್ಥಿಿತರಿದ್ದರು.
ಮಂಡ್ಯ ಜಿಲ್ಲೆಯ ವಿಸಿ ಾರಂನಲ್ಲಿ ಕೃಷಿ ಮೇಳ ಉದ್ಘಾಟನೆ ರೈತರು ಸಮಗ್ರ ಕೃಷಿ ಪದ್ಧತಿ ಅನುಸರಿಸಲಿ : ಸಿದ್ದರಾಮಯ್ಯ

