ಸುದ್ದಿಮೂಲ ವಾರ್ತೆ ಬೆಂಗಳೂರು, ಅ.02:
ನವೆಂಬರ್ನಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಾಂತಿಯಾಗುತ್ತದೆ ಎಂಬ ವರದಿಗಳನ್ನು ತಳ್ಳಿಿ ಹಾಕಿರುವ ಸಾರಿಗೆ ಸಚಿವ ಆರ್. ರಾಮಲಿಂಗರೆಡ್ಡಿಿ, ನವೆಂಬರ್ ಕ್ರಾಾಂತಿ ಇಲ್ಲ, ಬರೀ ಬ್ರಾಾಂತಿ ಅಷ್ಟೇ. ಮುಖ್ಯಮಂತ್ರಿಿಯಾಗಿ ಸಿದ್ದರಾಮಯ್ಯನವರೇ 5 ವರ್ಷ ಮುಂದುವರೆಯಲಿದ್ದಾರೆ ಎಂದು ಹೇಳಿದ್ದಾರೆ.
ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ದಿ. ಲಾಲ್ ಬಹದ್ದೂರ್ ಶಾಸಿಯವರ ಜಯಂತಿ ದಿನವಾದ ಇಂದು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಗಾಂಧೀಜಿ ಪ್ರತಿಮೆ ಹಾಗೂ ಲಾಲ್ ಬಹದ್ದೂರ್ ಶಾಸಿಯವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿಿ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಿಯಾಗಿರುತ್ತಾಾರೆ ಎಂದು ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುರ್ಮಾ ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಹೇಳಿದ ಮೇಲೆ ಸಿಎಂ ಬದಲಾವಣೆ ವಿಷಯವೇ ಇಲ್ಲ ಎಂದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯ ಕೂಡಾ ನಾನೇ 5 ವರ್ಷ ಅಧಿಕಾರದಲ್ಲಿರುತ್ತೇನೆ ಎಂದು ಹೇಳಿದ್ದಾರೆ. ಜತೆಗೆ ಡಿ.ಕೆ. ಶಿವಕುಮಾರ್ ಕೂಡಾ ಸಿದ್ದರಾಮಯ್ಯನವರೇ ಮುಂದುವರೆಯುತ್ತಾಾರೆ ಎಂದು ಹೇಳಿದ್ದಾರೆ. ಹಾಗಾಗಿ ಸಿಎಂ ಬದಲಾವಣೆ ಪ್ರಶ್ನೆೆ ಇಲ್ಲ ಎಂದರು.
ನವೆಂಬರ್ನಲ್ಲಿ ಕ್ರಾಾಂತಿ ಇಲ್ಲ. ಇದೆಲ್ಲಾ ಬ್ರಾಾಂತಿ ಅಷ್ಟೇ. ನವೆಂಬರ್ಗೆ ಸಚಿವ ಸಂಪುಟ ಪುನರ್ ರಚನೆಯಾಗಬಹುದು ಅಷ್ಟೇ. ಸಂಪುಟ ಪುನರ್ ರಚನೆಯ ಬಗ್ಗೆೆ ಮುಖ್ಯಮಂತ್ರಿಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಹಾಗೂ ಹೈಕಮಾಂಡ್ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾಾರೆ ಎಂದರು.
ಬೆಂಗಳೂರು ಅಭಿವೃದ್ಧಿಿ ಸಚಿವರಾಗಿ ಡಿ.ಕೆ. ಶಿವಕುಮಾರ್ ಇದ್ದಾರೆ. ಹೀಗಿರುವಾಗ ನಾನು ಬೆಂಗಳೂರು ಅಭಿವೃದ್ಧಿಿ ಖಾತೆ ಕೇಳುತ್ತೇನೆ ಎಂಬುದೆಲ್ಲಾ ಸರಿಯಲ್ಲ. ನಾನೆಂದೂ ಇಂತಹ ಖಾತೆ ಬೇಕು, ಜಿಲ್ಲಾ ಉಸ್ತುವಾರಿ ಸಚಿವನಾಗಬೇಕು ಎಂದು ನನ್ನ ರಾಜಕೀಯ ಜೀವನದಲ್ಲಿ ಕೇಳಿಲ್ಲ, ಮುಂದೆಯೂ ಕೇಳಿಲ್ಲ ಎಂದು ಅವರು ಹೇಳಿದರು.

