ಸುದ್ದಿಮೂಲ ವಾರ್ತೆ ಬೆಂಗಳೂರು, ಜ.05:
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಭಿಪ್ರಾಾಯಪಟ್ಟಿಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಅವರ ಪರ್ಯಾಯ ವ್ಯವಸ್ಥೆೆ ಕಷ್ಟಸಾಧ್ಯ. ಹಾಗೆಂದು ಬೇರೆಯವರಿಗೆ ಈ ಸಾಮರ್ಥ್ಯ ಇಲ್ಲ ಎಂದು ನಾನು ಹೇಳುವುದಿಲ್ಲ. ಅವರ ನಾಯಕತ್ವವೇ ಬೇರೆ, ಬೇರೆಯವರ ಸಾಮರ್ಥ್ಯವೇ ಬೇರೆ ಎಂದು ವಿಶ್ಲೇಷಿಸಿದರು.
ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಅವರು ಪಕ್ಷ ಸಂಘಟನೆಯಲ್ಲಿ ಮುಂದಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಅವರು ಸರ್ಕಾರವನ್ನು ಯಶಸ್ವಿಿಯಾಗಿ ಮುನ್ನಡೆಸುತ್ತಿಿದ್ದಾರೆ. ರಾಜಕಾರಣದಲ್ಲಿ ಇಂತಹ ಕಾಂಬಿನೇಷನ್ ತುಂಬಾ ಅಪರೂಪ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರಂತಹ ನಾಯಕತ್ವ ಇನ್ನೆೆಲ್ಲೂ ಇಲ್ಲ. ನಮಗೆಲ್ಲಾ ಅವರಿಂದ ಗೌರವ ಹೆಚ್ಚಿಿದೆ. ನಾಯಕತ್ವ ಬದಲಾವಣೆ ಕುರಿತಂತೆ ನಾನು ಹೆಚ್ಚು ಮಾತನಾಡುವುದಿಲ್ಲ. ಅದರ ಬಗ್ಗೆೆ ಹೇಳಲು ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿಿಗಳಾದ ದೇವರಾಜ ಅರಸು, ರಾಮಕೃಷ್ಣ ಹೆಗಡೆಯವರಂತಹ ದಿಗ್ಗಜರ ಸಾಲಿನಲ್ಲಿ ಸಿದ್ದರಾಮಯ್ಯ ನಿಲ್ಲುತ್ತಾಾರೆ. ಹೀಗಾಗಿ ನಾಯಕತ್ವದ ಬದಲಾವಣೆ ಕಷ್ಟಸಾಧ್ಯ ಎಂದು ಪುನರುಚ್ಚರಿಸಿದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ರಾಜ್ಯದಲ್ಲೇ ಅತಿ ಹೆಚ್ಚು ದಿನಗಳ ಕಾಲ ಆಡಳಿತ ನಡೆಸಿದ ದಾಖಲೆಗೆ ಪಾತ್ರರಾಗಿರುವುದಕ್ಕೆೆ ಪ್ರತಿಕ್ರಿಿಯೆ ನೀಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಇದೊಂದು ದಾಖಲೆಯೇ ಸರಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
22 ವರ್ಷಗಳಿಂದ ನಾನು ಅವರ ಕೆಲಸ ನೋಡಿದ್ದೇನೆ. ಯಾವಾಗಲೂ ಅವರು ತಾಯಿ ಹೃದಯದಿಂದ ಕೆಲಸ ನಿರ್ವಹಿಸುತ್ತಾಾರೆ. ಅವರ ನಡವಳಿಕೆ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಅವರು ಪ್ರಶಂಸಿಸಿದರು.

