ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.28:
ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಮೂಲಕ ಗ್ರಾಾಮೀಣ ಆರ್ಥಿಕತೆಯನ್ನು ದುರ್ಬಲಗೊಳಿಸಲು ಹೊರಟಿದ್ದು, ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಲಗೊಳಿಸಬೇಕು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ವತಿಯಿಂದ ಭಾನುವಾರ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆೆಸ್ ಸಂಸ್ಥಾಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗ್ರಾಾಮ ಪಂಚಾಯಿತಿಯಿಂದ ರಾಜ್ಯ ಮಟ್ಟದವರೆಗೆ ಜನವರಿ 5 ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾಾರಂಭಿಸಲು ಕಾಂಗ್ರೆೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ಮನರೇಗಾ ಕಾರ್ಯಕ್ರಮದಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಾಗಿ ಕೆಲಸ ದೊರಕುತ್ತಿಿತ್ತು . ಕೇಂದ್ರ ಸರ್ಕಾರ ರಾಜ್ಯಗಳಿಗೆ ಅನುದಾನವನ್ನು ಕೊಡುತ್ತಿಿತ್ತು. ಈಗ ಹೊಸ ಕಾಯ್ದೆೆ ಜಾರಿಗೆ ತಂದು, ಶೇ. 60 ಕೇಂದ್ರ ಶೇ. 40 ರಾಜ್ಯ ಸರ್ಕಾರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರಿ ಹೊರೆಯನ್ನೇ ಹೊರೆಸುತ್ತಿಿದ್ದಾರೆ. ಇದನ್ನು ವಿಲಗೊಳಿಸಬೇಕು ಎಂದರು.
ಕಾಂಗ್ರೆೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ ಇದೊಂದು ಚಳುವಳಿ ಮತ್ತು ಸಿದ್ಧಾಾಂತ. ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ , ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಾಂತ ನಮ್ಮದ. ಸತ್ಯಾಾಗ್ರಹ, ಅಹಿಂಸೆ ಮೂಲಕ ದೇಶಕ್ಕೆೆ ಸ್ವಾಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆೆಸ್. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ ಎಂದರು.
ಎಲ್ಲರ ಅಧಿಕಾರಕ್ಕೂ ಕೊನೆ ಇದೆ:
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಈ ದೇಶದ ಇತಿಹಾಸದಿಂದ ಅಳಿಸಿಹಾಕಲು ಯಾರಿಗೂ ಸಾಧ್ಯವಿಲ್ಲ. ಬಿಜೆಪಿ ಹಾಗೂ ಅವರ ಅಧಿಕಾರ ಯಾವುದೂ ಶಾಶ್ವತವಲ್ಲ. ಆ ಪಕ್ಷ ಇನ್ನೆೆಷ್ಟು ದಿನ ಇರುತ್ತದೆ? ಎಲ್ಲದಕ್ಕೂ ಕೊನೇ ಎಂಬುದು ಇರಲೇ ಬೇಕಲ್ಲವೇ? ಎಂದು ಪ್ರಶ್ನಿಿಸಿದರು.
ಎಂತೆಂಥಹ ಚಕ್ರವರ್ತಿಗಳೇ ಮೂಲೆಗುಂಪಾಗಿ ಹೋಗಿದ್ದಾರೆ. ಅಲೆಗ್ಸಾಾಂಡರ್ ದಿ ಗ್ರೇೇಟ್ ಇಡೀ ಪ್ರಪಂಚದ ಮುಕ್ಕಾಾಲು ಪಾಲು ಗೆದ್ದವರೇ ಶಾಶ್ವತವಲ್ಲ. ಸದ್ದಾಂ ಹುಸೇನ್ ಕೊನೆಗಾಲದಲ್ಲಿ ಅವಿತುಕೊಳ್ಳಬೇಕಾಯಿತು. ಇನ್ನು ಬೇರೆಯವರದು ಯಾವ ಲೆಕ್ಕ? ಮನರೇಗಾ ಹೆಸರು ಬದಲಾವಣೆ ವಿರೋಧಿಸಿ 2026 ರ ಜನವರಿ 5 ನೇ ತಾರೀಕಿನಿಂದ ಹೊಸ ಹೋರಾಟ ರೂಪಿಸಲಾಗುವುದು. ಪಂಚಾಯತಿ ಮಟ್ಟದಿಂದ ಈ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದರು.
ಗ್ಯಾಾರಂಟಿ ಸಮಿತಿ ಸದಸ್ಯರು, ಬೆಸ್ಕಾಾಂ, ಆರೋಗ್ಯ ಸಮಿತಿ ಸೇರಿದಂತೆ ಇತರೇ ಇಲಾಖೆಗಳಿಂದ ನಾಮನಿರ್ದೇಶನ ಮಾಡಿರುವ ಸದಸ್ಯರ ಸಂಖ್ಯೆೆಯೇ 150- 200 ಇದ್ದು ಇವರೆಲ್ಲರೂ ಹೋರಾಟದ ಜವಾಬ್ದಾಾರಿ ತೆಗೆದುಕೊಳ್ಳಬೇಕು. ಇದರ ಉಸ್ತುವಾರಿಗೆ ಜಿ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವೀಕ್ಷಕರನ್ನು ನೇಮಿಸಲಾಗುತ್ತದೆ ಎಂದು ಹೇಳಿದರು.
ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಎಐಸಿಸಿ ಅಧಿವೇಶನ ನೂರು ವರ್ಷದ ನೆನಪಿಗೆ 100 ಕಾಂಗ್ರೆೆಸ್ ಕಚೇರಿಗಳನ್ನು ನಿರ್ಮಾಣ ಮಾಡಬೇಕು ಎಂದು ಹೊರಟಿದ್ದೇವೆ. ಈಗಾಗಲೇ 70 ಕಾಂಗ್ರೆೆಸ್ ಕಚೇರಿಗಳು ನಿರ್ಮಾಣವಾಗಿವೆ. ಬೆಂಗಳೂರಿನಲ್ಲೂ ಎರಡು ಕಚೇರಿಗಳ ನಿರ್ಮಾಣ ಮಾಡಲಾಗುವುದು. ಒಂದಕ್ಕೆೆ ರಾಮಲಿಂಗಾರೆಡ್ಡಿಿ ಅವರು ಇನ್ನೊೊಂದು ಕಚೇರಿ ಜವಾಬ್ದಾಾರಿಯನ್ನು ನಾನು ತೆಗೆದುಕೊಂಡಿದ್ದೇನೆ. ಒಂದು ಜಿಲ್ಲಾ ಕಚೇರಿ ಇನ್ನೊೊಂದು ರಾಜ್ಯ ಕಚೇರಿ. ಮೈಸೂರಿನಲ್ಲಿಯೂ ಸಹ ದೊಡ್ಡ ಕಚೇರಿ ನಿರ್ಮಾಣ ಮಾಡಲಾಗುವುದು. ಇದರ ಜವಾಬ್ದಾಾರಿಯನ್ನು ಮುಖ್ಯಮಂತ್ರಿಿಯವರು ತೆಗೆದುಕೊಂಡಿದ್ದಾರೆ. ಮೈಸೂರು ಕಾಂಗ್ರೆೆಸ್ ಭವನಕ್ಕೆೆ ಎಲ್ಲಾ ಯೋಜನೆ ಅಂತಿಮ ಮಾಡಿ ಭೂಮಿಪೂಜೆ ಕೂಡ ನೆರವೇರಿಸಿದ್ದೇನೆ ಎಂದು ಹೇಳಿದರು.
ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಅಧ್ಯಕ್ಷರುಗಳು ಅಡಿಪಾಯ ಹಾಕಲು ಕಾಯಲು ಹೋಗಬೇಡಿ. ಏಕೆಂದರೆ ಮಲ್ಲಿಕಾರ್ಜುನ ಖರ್ಗೆ ಅವರು ಹಾಗು ರಾಹುಲ್ ಗಾಂಧಿಯವರು ಬೆಂಗಳೂರಿನಲ್ಲಿ ವರ್ಚುಯಲ್ ಆಗಿ ಎಲ್ಲಾ ಕಾಂಗ್ರೆೆಸ್ ಭವನಗಳ ಅಡಿಪಾಯಗಳಿಗೆ ಚಾಲನೆ ನೀಡಲಿದ್ದಾರೆ. ಆದರೆ ಎಲ್ಲಾ ತಯಾರಿಗಳನ್ನು ಈಗಲೇ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಕೆ ಜೆ ಜಾರ್ಜ್, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಗ್ಯಾಾರಂಟಿ ಯೋಜನೆ ಅನುಷ್ಠಾಾನ ಸಮಿತಿ ರಾಜ್ಯಾಾಧ್ಯಕ್ಷ ಎಚ್ ಎಂ ರೇವಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ ಜಿ ಸಿ ಚಂದ್ರಶೇಖರ್, ಎಐಸಿಸಿ ಜಂಟಿ ಕಾರ್ಯದರ್ಶಿ ಡಾ ಪಾಲಕ್ ವರ್ಮಾ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯಸಭೆ ಮಾಜಿ ಪ್ರೊೊ ರಾಜೀವ್ ಗೌಡ ಮತ್ತಿಿತರರು ಉಪಸ್ಥಿಿತರಿದ್ದರು.
ರಾಷ್ಟ್ರಪಿತನ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸಲು ಪಣ ಕೇಂದ್ರದಿಂದ ಗ್ರಾಾಮೀಣ ಅರ್ಥಿಕತೆ ದುರ್ಬಲಗೊಳಿಸುವ ಪ್ರಯತ್ನ: ಸಿದ್ದರಾಮಯ್ಯ

