ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 17: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೇ 18ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ನಕಲಿ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ (ಮೇ 18) ಮಧ್ಯಾಹ್ನ 3.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ ಎಂಬ ಮಾಹಿತಿಯುಳ್ಳ ಆಹ್ವಾನ ಪತ್ರವೊಂದು ಹರಿದಾಡಿದೆ.
ಆದರೆ, ಮುಖ್ಯಮಂತ್ರಿ ಆಯ್ಕೆಯ ಬಿಕ್ಕಟ್ಟು ಇನ್ನೂ ಮುಂದುವರಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಆಯ್ಕೆ ಇನ್ನೂ ಖಚಿತವಾಗಿಲ್ಲ.
‘ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ,’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನವದೆಹಲಿಯಲ್ಲಿ ಸ್ಪಷ್ಟಪಡಿಸಿದ್ದಾರೆ.