ಸುದ್ದಿಮೂಲ ವಾರ್ತೆ
ಬೆಂಗಳೂರು.ಮೇ.15: ಹೈಕಮಾಂಡ್ ನಾಯಕರ ಕರೆ ಮೇರೆಗೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಇಂದು ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಉಭಯ ನಾಯಕರೊಂದಿಗೆ ಸಭೆಯನ್ನು ನಡೆಸಿ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲು ಉದ್ದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರು ನಾಯಕರನ್ನು ದೆಹಲಿಗೆ ಬರಲು ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.