ಸುದ್ದಿಮೂಲ ವಾರ್ತೆ ರಾಯಚೂರು, ಅ.15:
ಕರ್ನಾಟಕದ ಕಾರ್ಮಿಕ ಇಲಾಖೆ ಮನೆಗೆಲಸ ಮತ್ತಿಿತರ ಸಣ್ಣ ಪುಟ್ಟ ಕೆಲಸ ಮಾಡುವ ಮಹಿಳೆಯರ ಸಾಮಾಜಿಕ, ಆರ್ಥಿಕ ಭದ್ರತೆಗಾಗಿ ಶೀಘ್ರವೆ ಯೋಜನೆಯೊಂದು ಜಾರಿಗೆ ತರುವ ಮೂಲಕ ದೇಶದಲ್ಲಿಯೇ ಅಮೂಲಾಗ್ರ ಬದಲಾವಣೆಗೆ ಮುಂದಡಿ ಇಡುತ್ತಿಿದ್ದೇವೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಗಂಜ್ ಕಲ್ಯಾಾಣ ಮಂಟಪದಲ್ಲಿ ನಡೆದ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತ ಅರಿವು ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದರು.
ಸಣ್ಣ ಸಣ್ಣ ಕಸುಬು ಮಾಡುವ 101 ವರ್ಗದ ಕಾರ್ಮಿಕರು ದೇಶದ ದುಡಿಯುವ ವರ್ಗದಲ್ಲಿ ಶೇ.83ಕ್ಕಿಿಂತ ಹೆಚ್ಚಿಿನ ಸಂಖ್ಯೆೆಯಲ್ಲಿದ್ದು ಇ- ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಉದ್ಯೋೋಗ ಕೊಡುವ ಖಾಸಗಿ ಉದ್ಯೋೋಗದಾತರಿಗೆ ವೇತನ ಮರು ಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮತಿಕ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೆಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆ ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ ರಾಜ್ಯದತ್ತ ನೋಡುವಂತಾಗಿದೆ ಎಂದು ಹೇಳಿದರು.
ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಸುಮಾರು 30 ರಿಂದ 40 ಲಕ್ಷ ಕಾರ್ಮಿಕರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾಾರ್ಟ್ ಕಾರ್ಡ್ ನೀಡುತ್ತಿಿದ್ದು ರಾಯಚೂರು ಜಿಲ್ಲೆಯಲ್ಲಿ 58 ಸಾವಿರ ಸೇರಿ ರಾಜ್ಯದಲ್ಲಿ 25 ಲಕ್ಷ 45 ಸಾವಿರ ಕಾರ್ಮಿಕರು ನೋಂದಣಿಯಾಗಿದ್ದಾಾರೆ .
ರಾಜ್ಯದಲ್ಲಿ ದಿನಪತ್ರಿಿಕೆ ವಿತರಣಾ ಕಾರ್ಮಿಕರು ಎಂದು 6047 ಜನರನ್ನು ನೋಂದಾಯಿಸಿದ್ದು, ಇವರಿಗೆ 2 ಲಕ್ಷ ಅಪಘಾತ ಪರಿಹಾರ ಮತ್ತು 1 ಲಕ್ಷ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿಿದೆ.ರಾಜ್ಯದಲ್ಲಿರುವ 17 ಸಾವಿರ ಕೈಗಾರಿಕೆ, ಉದ್ದಿಮೆದಾರರು ನೋಂದಾಯಿಸಿಕೊಳ್ಳಲು ಸೂಚಿಸಿದ್ದು ಇದುವರೆಗೆ 7 ಸಾವಿರ ಉದ್ದಿಮೆದಾರರು ನೋಂದಾಯಿಸಿಕೊಂಡಿದ್ದಾಾರೆ ಎಂದರು.
ಪ್ರತಿ ಗಂಟೆಗೆ ಆರು ಜನರು ರಸ್ತೆೆ ಅಪಘಾತದಲ್ಲಿ ಸಾವಿಗೀಡಾಗುತ್ತಾಾರೆ ಎನ್ನುವ ಆತಂಕಕಾರಿ ಅಂಕಿ ಅಂಶಗಳ ವರದಿ ಇದೆ. ಈ ಬಗ್ಗೆೆ ಜಿಲ್ಲಾಧಿಕಾರಿ, ಸಿಇಓ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಕಾಳಜಿ ವಹಿಸಿ ರಸ್ತೆೆ ಸುರಕ್ಷತೆ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ರಾಯಚೂರಿನ ಸಚಿವ ಎನ್.ಎಸ್.ಬೋಸರಾಜ್, ಗ್ರಾಾಮೀಣ ಶಾಸಕ ಬಸನಗೌಡ ದದ್ದಲ್ ಅವರ ಕೋರಿಕೆಯಂತೆ ರಾಜ್ಯ ಸರ್ಕಾರದಿಂದ ಅಗತ್ಯ ಕ್ರಮ ವಹಿಸಿ ರಾಯಚೂರು ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆೆಯ ಮುಖ್ಯ ಶಾಖೆ ಸ್ಥಾಾಪನೆಗೆ ಶಕ್ತಿಿಮೀರಿ ಪ್ರಯತ್ನಿಿಸುವುದಾಗಿ ಭರವಸೆ ನೀಡಿದರು.
ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 400 ಕಾರ್ಖಾನೆಗಳಿವೆ. ಇಲ್ಲಿ ಕೆಲಸ ಮಾಡುವ ಸಾವಿರಾರು ಸಂಖ್ಯೆೆಯ ಕಾರ್ಮಿಕರಿಗೆ ಇಎಸ್ಐ ಸೌಕರ್ಯ ಸಿಗುವ ನಿಟ್ಟಿಿನಲ್ಲಿ ರಾಯಚೂರ ಜಿಲ್ಲೆಗೆ ಇಎಸ್ಐ ಆಸ್ಪತ್ರೆೆ ಮಂಜೂರಿ ಮಾಡಲು ಆದೇಶ ಮಾಡಬೇಕು ಎಂದು ಮನವಿ ಮಾಡಿದರು. ಸಚಿವರು ಇಡೀ ದೇಶವೇ ಕರ್ನಾಟಕ ರಾಜ್ಯದತ್ತ ತಿರುಗಿ ನೋಡುವ ರೀತಿಯಲ್ಲಿ ಕಾರ್ಮಿಕ ಇಲಾಖೆಯಲ್ಲಿ ಕ್ರಾಾಂತಿಕಾರಿ ಯೋಜನೆ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.
ಶಾಸಕ ಹಂಪಯ್ಯ ನಾಯಕ ಅವರು ಮಾತನಾಡಿ, ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ರಾಜ್ಯಾಾದ್ಯಂತ ಸುತ್ತಿಿ, ಕಾರ್ಮಿಕ ವರ್ಗದ ನಾಡಿಮಿಡಿತ ಅರಿತು ಕಾರ್ಮಿಕರಿಗೆ ಅನುಕೂಲವಾಗುವ ರೀತಿಯ ಅನೇಕ ಯೋಜನೆಗಳ ಜಾರಿ ಮಾಡಿದ್ದಾರೆ ಎಂದರು.
ಸಮಾರಂಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಮೇಯರ್ ನರಸಮ್ಮ ನರಸಿಂಹಲು ಮಾಡಗಿರಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಉಪಾಧ್ಯಕ್ಷ ಬಶೀರ್, ಆರ್ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಾಮಿ, ಜಿಲ್ಲಾ ಮಟ್ಟದ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಸಮಿತಿಯ ಅಧ್ಯಕ್ಷ ಪಾಮಯ್ಯ ಮುರಾರಿ, ಕಾರ್ಮಿಕ ಆಯುಕ್ತರಾದ ಡಾ.ಎಚ್.ಎನ್. ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ಎಸ್ ಪಿ ರವಿಕುಮಾರ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಎಸ್ಪಿ ಪುಟ್ಟಮಾದಯ್ಯ ಎಂ., ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ ಪೂಜಾರ, ಜಿಲ್ಲಾ ಕಾರ್ಮಿಕ ಇಲಾಖೆಯ ನಿರೀಕ್ಷಕರಾದ ಪ್ರಿಿಯಾಂಕ ಭಾಸತ್ಕರ ಸೇರಿದಂತೆ ಇತರರಿದ್ದರು.