ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.29: ಮಂಡ್ಯ ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆಯಡಿ ನೊಂದಾಯಿಸಿಕೊಂಡಿರುವ ರೈತರ ಅಧಾರ್ ಸಂಖ್ಯೆ ಪಡೆದು ಲಿಂಕ್ ಮಾಡುವ ಇ- ಕೆವೈಸಿ ಕೆಲಸವನ್ನು ತಹಶೀಲ್ದಾರ್ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಬುಧುವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ 65 ಸಾವಿರ ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಇ-ಕೆವೈಸಿ ನೋಂದಾಯಿಸಿಕೊಂಡಿಲ್ಲ. ಆಗಾಗಿ ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆಯುವ ಕೆಲಸ ಮಾಡುತ್ತಾರೆ. ರೈತರು ತಮ್ಮ ಆಧಾರ್ ಸಂಖ್ಯೆಯನ್ನು ನೀಡಿ ಅಧಿಕಾರಿಗಳಿಗೆ ಸಹಕರಿಸಿ ಎಂದರು.
ಮುಂದಿನ 10 ದಿವಸಗಳಲ್ಲಿ ಜಿಲ್ಲೆಯ ಎಲ್ಲಾ ರೈತರನ್ನು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಅಧಾರ್ ಲಿಂಕ್ ಮಾಡುವ ಗುರಿ ನಿಗದಿಪಡಿಸಿದ್ದು, ಅದರಂತೆ ನಡೆಯಲಿದೆ. ಪ್ರಮುಖವಾಗಿ ರೈತರ ಸಹಕಾರ ಮುಖ್ಯವಾಗಿದೆ ಎಂದರು.
ಸಭೆಯಲ್ಲಿ ಆರ್.ಟಿ.ಸಿ ತಿದ್ದುಪಡಿ, ಕಂದಾಯ ಇಲಾಖೆಯ ನ್ಯಾಯಾಲಯ ಸೇರಿದಂತೆ ವಿವಿಧ ಇಲಾಖೆಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಯಿತು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್. ನಾಗರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಮದ್ದೂರು ತಹಶಿಲ್ದಾರ್ ನರಸಿಂಹಮೂರ್ತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.