ಸುದ್ದಿಮೂಲ ವಾರ್ತೆ
ಬೆಂಗಳೂರು, ಅ. 16 : ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ʻವಿಶ್ವ ಬೆನ್ನುಮೂಳೆ ದಿನಾಚರಣೆʼ ಕಾರ್ಯಕ್ರಮವನ್ನು ಸಚಿವ ದಿನೇಶ್ ಗುಂಡೂರರಾವ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನಮ್ಮ ದೈನಂದಿನ ಚಟುವಟಿಕೆಗಳು ಸುಸೂತ್ರವಾಗಿ ಸಾಗಲು ಬೆನ್ನುಮೂಳೆಯ ಆರೋಗ್ಯ ಕಾಪಾಡುವುದು ಅತಿ ಮುಖ್ಯವಾಗಿದೆ. ನಿಯಮಿತ ವ್ಯಾಯಾಮ ಇದಕ್ಕೆ ಸಹಕಾರಿಯಾಗಿದೆ. 700ಕ್ಕೂ ಅಧಿಕ ಬೆನ್ನು ಹುರಿ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯ ವೈದ್ಯರ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಹರ್ಷದ್, ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯ ಮುಖ್ಯಸ್ಥರು, ವೈದ್ಯರು ಸಿಬ್ಬಂದಿ ಉಪಸ್ಥಿತರಿದ್ದರು.