ಸುದ್ದಿಮೂಲ ವಾರ್ತೆ
ತಿರುಪತಿ, ಸೆ.2. ತಿರುಮಲ ತಿರುಪತಿ ಆಡಳಿತ ಮಂಡಳಿಯ ಸದಸ್ಯರಾಗಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಟಿಟಿಡಿ ಆಡಳಿತ ಮಂಡಳಿಯ ಅಧಿಕಾರಿಗಳಾದ ಲಕನಾಥಮ್ ಮತ್ತು ವಿ. ವೀರಬ್ರಹ್ಮಯ್ಯ ಇನ್ನಿತರರು ಇದ್ದರು.
ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಂನ ಆಡಳಿತ ಮಂಡಳಿ ಸದಸ್ಯರನ್ನಾಗಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಎರಡನೇ ಅವಧಿಗೆ ನೇಮಕ ಮಾಡಲಾಗಿದೆ. ಈ ಸಂಬಂಧ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಕಚೇರಿ ಇತ್ತೀಚೆಗೆ ಹೊರಡಿಸಿತ್ತು.
ಮತ್ತೊಂದು ಅವಧಿಗೆ ಆಡಳಿತ ಮಂಡಳಿ ಸದಸ್ಯರನ್ನಾಗಿ ನೇಮಕವಾಗಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಎಸ್.ಆರ್.ವಿಶ್ವನಾಥ್ ಅವರು, ಈ ನೇಮಕಕ್ಕೆ ಕಾರಣರಾದ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಹಿರಿಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ತಿರುಪತಿ ಶ್ರೀ ವೆಂಕಟೇಶ್ವರ ದೇವರ ಸೇವೆ ಮಾಡಲು ನನಗೆ ಇಂತಹ ಅವಕಾಶ ಸಿಕ್ಕಿರುವುದು ಅತೀವ ಸಂತಸ ತಂದಿದೆ. ಇದಕ್ಕೆ ನನ್ನ ಮತ ಕ್ಷೇತ್ರದ ಜನತೆ, ಅಪಾರ ಸಂಖ್ಯೆಯ ಭಕ್ತರ ಆಶೀರ್ವಾದ ಕಾರಣವಾಗಿದೆ ಎಂದು ತಿಳಿಸಿದ್ದಾರೆ.