ಸುದ್ದಿಮೂಲವಾರ್ತೆ
ಕೊಪ್ಪಳ,ಜೂ.27: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ, ಹಿರಿಯ ಸಾಹಿತಿಗಳಾದ ಡಾ.ಮಹಾಂತೇಶ ಮಲ್ಲನಗೌಡ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಇದ್ದರು.