ಶಿಡ್ಲಘಟ್ಟ,ಜೂ.20:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ) ವತಿಯಿಂದ ರಜತ ಮಹೋತ್ಸವದ ಅಂಗವಾಗಿ ಪರಮಪೂಜ್ಯ ಡಾ ಡಿ.ವೀರೇಂದ್ರ ಹೆಗ್ಗಡ್ಡೆಯವರು ಪ್ರಾರಂಭ ಮಾಡಿದ ಸುಜ್ಞಾನನಿಧಿ ಶಿಷ್ಯವೇತನ ಕಾರ್ಯಕ್ರಮದಡಿಯಲ್ಲಿ ರಾಜ್ಯಾದ್ಯಂತ ಇದುವರೆಗೂ ೬೦೦೦೦ಕ್ಕೂ ಮಿಕ್ಕಿದ ಸ್ವ-ಸಹಾಯ ಸಂಘಗಳ ಪಾಲುದಾರ ಕುಟುಂಬದ ವಿದ್ಯಾರ್ಥಿಗಳಿಗೆ ಇದುವರೆಗೂ ಒಟ್ಟು 70 ಕೋಟಿ ರೂ.ಮೊತ್ತವನ್ನು ತಮ್ಮ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗುವಂತೆ ಶಿಷ್ಯವೇತನವನ್ನು ವಿತರಣೆ ಮಾಡಲಾಗಿದೆ.
ಅದ್ದರಂತೆ ಶಿಡ್ಲಘಟ್ಟ ತಾಲ್ಲೂಕಿನ ೨೦೨೩-೨೪ ನೇ ಸಾಲಿನಲ್ಲಿ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಆಯ್ಕೆಯಾದ ಒಟ್ಟು ೧೯೯ ಮಂದಿ ವಿದ್ಯಾರ್ಥಿಗಳಿಗೆ ಸುಮಾರು ೨೯,೯೯,೦೦೦/-ರೂ ಶಿಷ್ಯವೇತನ ಮಂಜೂರಾತಿ ಪತ್ರವನ್ನು ದಿನಾಂಕ: ೨೦.೦೬.೨೦೨೩ ರಂದು ಕಾಳಿಕಾಂಭ ಸಭಾಂಗಣದಲ್ಲಿ ಯೋಜನೆಯ ಚಿಕ್ಕಬಳ್ಳಾಪುರ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ಸಿ.ಎಸ್ ರವರು ಪೋಷಕರ ಸಮ್ಮುಖದಲ್ಲಿ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಲ್ಲಾ ನಿರ್ದೇಶಕ ಪ್ರಶಾಂತ್ ಸಿ.ಎಸ್ ರವರು ಪೂಜ್ಯರು ಆರಂಭಿಸಿರುವ ಈ ಕಾರ್ಯಕ್ರಮವು ರಾಜ್ಯಾದ್ಯಾಂತ ಸುಮಾರು ೬೦,೦೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ನೆರವಾಗಿದೆ,ಅದರಂತೆ ಶಿಡ್ಲಘಟ್ಟ ತಾಲ್ಲೂಕಿನ ೧೯೯ ಮಂದಿ ವಿದ್ಯಾರ್ಥಿಗಳೂ ಸಹ ಶಿಷ್ಯವೇತನದ ಸದುಪಯೋಗ ಮಾಡಿಕೊಂಡು ತಮ್ಮ ಶಿಕ್ಷಣವನ್ನು ಉನ್ನತ ಮಟ್ಟಕ್ಕೆ ಒಯ್ಯಬೇಕೆಂದು ತಿಳಿಸಿದರು. ಅಲ್ಲದೆ ಈ ಕಾರ್ಯಕ್ರಮದ ಬಗ್ಗೆ ಇತರರಿಗೂ ತಿಳಿಸುವ ಮೂಲಕ ಮುಂದಿನ ವರ್ಷದಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಪೂಜ್ಯರ ಈ ಕಾರ್ಯಕ್ರಮದಿಂದ ಸದುಪಯೋಗ ಪಡೆದುಕೊಳ್ಳಲು ಸಹಕರಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಂಪನಿ ಸಿ.ಎ.ದೇವರಾಜ್ ರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಡೆಸಲಾಗುವ ಕಾರ್ಯಕ್ರಮಗಳು ಬೇರೆ ಯಾವುದೇ ಸಂಘ ಸಂಸ್ಥೆಗಳಲ್ಲಿ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಅಲ್ಲದೆ ಯೋಜನೆಯ ವತಿಯಿಂದ ನಡೆಸಲಾಗುವ ಎಲ್ಲಾ ಕಾರ್ಯಕ್ರಮಗಳು ಜನಸಾಮಾನ್ಯರಿಗೆ ತುಂಬಾ ಉಪಯುಕ್ತವಾಗಿದೆ ಅದರಂತೆ ಸುಜ್ಞಾನನಿಧಿ ಕಾರ್ಯಕ್ರಮದಿಂದ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ತುಂಬಾ ನೆರವಾಗಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಯೋಜನಾಧಿಕಾರಿಯಾದ ಸುರೇಶ ಗೌಡ.ಎಸ್, ಮೇಲ್ವಿಚಾರಕರಾದ ದಯಾನಂದ್,ಯೋಜನಾ ಕಛೇರಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.