ಸುದ್ದಿಮೂಲ ವಾರ್ತೆ
ಆನೇಕಲ್,ನ.5 : ಸೂರ್ಯ ನಗರ ಎರಡನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗಿಯಿತು.
ಕನ್ನಡ ಧ್ವಜ ಧ್ವಜಾರೋಹಣ ಮಾಡುವುದರ ಮೂಲಕ ಇನ್ನಷ್ಟು ಮೆರುಗು ತರುವಂತೆ ಮಾಡಿತ್ತು. ಭುವನೇಶ್ವರಿ ಫೋಟೋವನ್ನು ಇರಿಸಿ ಪುಷ್ಪ ನಮನ ಸಲ್ಲಿಸಲಾಯಿತು.
ಸೂರ್ಯ ನಗರ ಎರಡನೇ ಹಂತದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಕನ್ನಡದ ನೆಲ, ಜಲದ ವಿಷಯ ಬಂದಾಗ ಕನ್ನಡಿಗರೆಲ್ಲಾ ಒಂದಾಗಬೇಕು. ಸಂಸ್ಕೃತಿಯನ್ನು ಉಳಿಸಬೇಕು. ನಮ್ಮ ಸಂಪ್ರದಾಯಕ್ಕೆ ಹೆಚ್ಚು ಪ್ರೋತ್ಸಾಹ ಸಿಗಬೇಕು ಎಂದು ತಿಳಿಸಿದರು.