ಸುದ್ದಿಮೂಲ ವಾರ್ತೆ ರಾಯಚೂರು, ಜ.15:
ಜಿಲ್ಲೆೆಯ ಲಿಂಗಸುಗೂರು ತಾಲೂಕಿನ ತೊಂಡೇಹಾಳ ಗ್ರಾಾಮದಲ್ಲಿ ಜ.19ರವರೆಗೆ ಜರುಗುವ ಶ್ರೀ ಹುಲಿಗೆಮ್ಮ ದೇವಿ ಜಾತ್ರಾಾ ಮಹೋತ್ಸವ ಹಾಗೂ ಮುಂತಾದ ಧಾರ್ಮಿಕ ಸ್ಥಳಗಳಲ್ಲಿ ಪ್ರಾಾಣಿ ಬಲಿ ತಡೆಯುವಂತೆ ವಿಶ್ವ ಪ್ರಾಾಣಿ ಕಲ್ಯಾಾಣ ಮಂಡಳಿ ಹಾಗೂ ಬಸವ ಧರ್ಮ ಜ್ಞಾನ ಪೀಠದ ಅಧ್ಯಕ್ಷ ಶ್ರೀ ದಯಾನಂದ ಸ್ವಾಾಮೀಜಿ ಒತ್ತಾಾಯಿಸಿದ್ದಾಾರೆ.
ಕಾರ್ಯಕ್ರಮದಲ್ಲಿ ಯಾವುದೇ ಪ್ರಾಾಣಿಗಳ ಬಲಿ ನಡೆಯದಂತೆ ಹಾಗೂ ಪ್ರಾಾಣಿ ಅಂಗಾಗಗಳ ನೈವೇದ್ಯ ಸಲ್ಲಿಕೆ, ಪ್ರದರ್ಶನ ಇತ್ಯಾಾದಿ ಕಾನೂನು ಬಾಹಿರ ಕೃತ್ಯಗಳು ಜರುಗದಂತೆ 1959ರ ಕರ್ನಾಟಕ ಪ್ರಾಾಣಿಬಲಿಗಳ ಪ್ರತಿಬಂಧಕ ಅಧಿನಿಯಮ ಹಾಗೂ 1963 ಮತ್ತು 1975 ರ ನಿಯಮಗಳ ಪ್ರಕಾರ ಮತ್ತು ರಾಜ್ಯ ಹೈಕೋರ್ಟ್ ಆದೇಶದಂತೆ ಕ್ರಮಗಳನ್ನು ಕೈಗೊಂಡು ಪ್ರಾಾಣಿಬಲಿ ರಾಯಚೂರು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಭಕ್ತಾಾದಿಗಳು ಪ್ರಾಾಣಿಬಲಿ ತ್ಯಜಿಸಿ ಅಹಿಂಸಾತ್ಮಕವಾಗಿ ಸಾತ್ವಿಿಕ ಪೂಜೆ ಸಲ್ಲಿಸಬೇಕು ಎಂದು ಸ್ವಾಾಮೀಜಿ ಭಕ್ತರಲ್ಲಿ ವಿನಂತಿಸಿದ್ದಾರೆ. ದೇವಾಲಯಗಳು ವಧಾಲಯಗಳಾಗದೆ ದಿವ್ಯಾಾಲಯವಾಗಬೇಕು, ಜಾತ್ರಾಾ ಪರಿಸರಗಳ ಧಾರ್ಮಿಕ ಸ್ಥಾಾನಗಳು ಕಟುಕರ ಕೇರಿಗಳಾಗಬಾರದು, ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಾಣಿಹಿಂಸೆ ಮತ್ತು ಮಧ್ಯ ಮಾದಕ ಪದಾರ್ಥಗಳಿಂದ ಮುಕ್ತವಾಗಿರಬೇಕು ಎಂದು ಕೋರಿದರು.
ಜನರಲ್ಲಿ ಜಾಗೃತಿ ಮೂಡಿಸಲು ಜ.15ರಿಂದ ಲಿಂಗಸುಗೂರಿನ ವಿವಿಧ ಭಾಗಗಳಲ್ಲಿ ಹಾಗೂ ಶ್ರೀ ಹುಲಿಗೆಮ್ಮ ದೇವಿ ಜಾತ್ರಾಾ ಪರಿಸರ ಮತ್ತು ಸುತ್ತ ಮುತ್ತಲಿನ ಊರುಗಳಲ್ಲಿ ಅಹಿಂಸಾ ಪ್ರಾಾಣಿದಯಾ ಆಧ್ಯಾಾತ್ಮ ಸಂದೇಶಯಾತ್ರೆೆ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

