ಸುದ್ದಿಮೂಲ ವಾರ್ತೆ ಲಿಂಗಸುಗೂರು, ಜ.08:
ಪಟ್ಟಣದಲ್ಲಿ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಇತ್ತೀಚೆಗೆ ಜರುಗಿತು.
ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದ ಶಾಸಕ ಮಾನಪ್ಪ ವಜ್ಜಲ್ ವಿದ್ಯಾಾರ್ಥಿಗಳಲ್ಲಿರುವ ಸೃಜನಶೀಲತೆ, ಕಲಾ ಪ್ರತಿಭೆ ಮತ್ತು ಸಾಂಸ್ಕೃತಿಕ ಅರಿವು ಸಮಾಜದ ಭವಿಷ್ಯ ರೂಪಿಸುವ ಶಕ್ತಿಿಯಾಗಿದೆ ಎಂದು ಹೇಳಿದರು. ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಂತಹ ವೇದಿಕೆಗಳು ಮಕ್ಕಳ ಆತ್ಮವಿಶ್ವಾಾಸ ಹೆಚ್ಚಿಿಸುವುದರ ಜೊತೆಗೆ ಅವರಲ್ಲಿ ಅಡಗಿರುವ ಪ್ರತಿಭೆ ಹೊರತರುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಪಠ್ಯಾಾಧ್ಯಯನದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಹಾಗೂ ನಾಟಕಗಳಂತಹ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಕ್ಕಳ ಸಮಗ್ರ ವ್ಯಕ್ತಿಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಾಯಪಟ್ಟರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ ಮಾತನಾಡಿ, ಗ್ರಾಾಮೀಣ ಪ್ರದೇಶದ ವಿದ್ಯಾಾರ್ಥಿಗಳಲ್ಲಿಯೂ ಅಪಾರ ಪ್ರತಿಭೆ ಅಡಗಿದ್ದು, ಇಂತಹ ಸ್ಪರ್ಧಾತ್ಮಕ ಕಾರ್ಯಕ್ರಮಗಳು ಅದನ್ನು ಗುರುತಿಸಲು ಸಹಕಾರಿಯಾಗುತ್ತವೆ ಎಂದರು. ಸರ್ಕಾರ ಹಾಗೂ ಶಿಕ್ಷಣ ಇಲಾಖೆ ವಿದ್ಯಾಾರ್ಥಿಗಳ ಪ್ರತಿಭಾ ವಿಕಸನಕ್ಕೆೆ ಅಗತ್ಯವಾದ ಎಲ್ಲಾಾ ಸಹಕಾರ ನೀಡುತ್ತಿಿದೆ ಎಂದು ತಿಳಿಸಿದರು. ತಹಸೀಲ್ದಾಾರ ಕು.ಸತ್ಯಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೂನೂರು, ಲಿಂಗಸುಗೂರು ಮಂಡಲ ಅಧ್ಯಕ್ಷ ಕೆ.ನಾಗಭೂಷಣ್ ಸೇರಿ ಗಣ್ಯರು ಭಾಗವಹಿಸಿದ್ದರು. ತಾಲೂಕಿನ ವಿವಿಧ ಶಾಲೆಗಳ ವಿದ್ಯಾಾರ್ಥಿಗಳು ನೃತ್ಯ, ಸಂಗೀತ, ನಾಟಕ, ಭಾಷಣ ಸೇರಿ ಹಲವು ಕಲಾ ಪ್ರದರ್ಶನಗಳನ್ನು ನೀಡಿ ಪ್ರೇೇಕ್ಷಕರ ಮೆಚ್ಚುಗೆ ಪಡೆದರು. ಶಿಕ್ಷಕರು, ಪೋಷಕರು ಹಾಗೂ ಹೆಚ್ಚಿಿನ ಸಂಖ್ಯೆೆಯಲ್ಲಿ ವಿದ್ಯಾಾರ್ಥಿಗಳು ಭಾಗವಹಿಸಿದ್ದರು.
ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

