ಸುದ್ದಿಮೂಲ ವಾರ್ತೆ
ಮೈಸೂರು, ಜು.16: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುರೇಶ್ (30) ಬಂಧಿತ ಆರೋಪಿ. ಪೊಲೀಸರ ಪ್ರಕಾರ, ಮೈಸೂರು ಜಿಲ್ಲೆ ನರಸೀಪುರ ತಾಲೂಕಿನ ಗ್ರಾಮದಲ್ಲಿ
ಅಂಗಡಿಗೆ ಹೋಗುತ್ತಿದ್ದ 6 ವರ್ಷ ವಯಸ್ಸಿನ ಬಾಲಕಿಯನ್ನ ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ ಮಾಡಿದ್ದಾನೆ. ಈ ವೇಳೆ ಬಾಲಕಿ ಕಿರುಚಾಟ ಕೇಳಿ ಸ್ಥಳಕ್ಕೆ ಅಕ್ಕಪಕ್ಕದ ಮನೆಯವರು ದೌಡಾಯಿಸಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.
ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಆರೋಪಿಯನ್ನು ಬನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.,