ಬೆಂಗಳೂರು, ಸೆ.6: ಪಿಎಸ್ಐ ಪರಶುರಾಮ ಸಾವಿನ ಬಗ್ಗೆ ವರದಿ ನೀಡುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದೆ.
ಯಾದಗಿರಿ ಪಿಎಸ್ಐ ಆಗಿದ್ದ ಪರಶುರಾಮ ಅನುಮಾನಾಸ್ಪದ ಸಾವಿನ ಬಗ್ಗೆ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ಆರೋಪ ಮಾಡಿದ್ದಲ್ಲದೆ, ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಸಹ ಬರೆದಿದ್ದರು. ಶೋಭಾ ಕರಂದ್ಲಾಜೆ ಅವರ ಪತ್ರದ ಆಧಾರದ ಮೇಲೆ ಪರಶುರಾಮ್ ಸಾವಿನ ಬಗ್ಗೆ ವರದಿ ನೀಡುವಂತೆ ಕೇಂದ್ರ ವಿವರ ಕೇಳಿದೆ.
ಯಾದಗಿರಿ ಪಿಎಸ್ಐ ಪರಶುರಾಮ ಸಾವಿನ ತನಿಖೆಯ ಹೊಣೆಯನ್ನ ಹೊತ್ತಿರುವ ಸಿಐಡಿ ಅಧಿಕಾರಿಗಳು ತನಿಖೆಯನ್ನ ಚುರುಕುಗೊಳಿದ್ದಾರೆ. ಪರಶುರಾಮ ಕುಟುಂಬಸ್ಥರನ್ನ ಕರೆಸಿಕೊಂಡಿರುವ ಅಧಿಕಾರಿಗಳು ಪರಶುರಾಮ ಮೊಬೈಲ್ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರ ಸಮ್ಮುಖದಲ್ಲಿ ಸ್ಥಳ ಮಹಜರು ಕೂಡ ನಡೆಸಿದ್ದರು.