ಸುದ್ದಿಮೂಲ ವಾರ್ತೆ
ಬೆಂಗಳೂರು,ಅ.9:ಸ್ವಾವಲಂಭಿ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಖಾಸಗಿ ವಿಶ್ವವಿದ್ಯಾಲಯವೊಂದರ ಘಟಿಕೋತ್ಸವದಲ್ಲಿ ಮಾತನಾಡಿದ ರಾಜ್ಯಪಾಲರು, ಸ್ವಾತಂತ್ರ್ಯದ ೭೫ ವರ್ಷಗಳಲ್ಲಿ ದೇಶ ಎಲ್ಲ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದೆ. ಇಂದು ನಮ್ಮ ಆರ್ಥಿಕತೆ ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯಾಗಿದೆ. ದೇಶವನ್ನು ಮತ್ತಷ್ಟು ಬಲಪಡಿಸಲು ಮತ್ತು ಆರ್ಥಿಕತೆಯಲ್ಲಿ ಮೂರನೇ ಸ್ಥಾನಕ್ಕೆ ಕೊಂಡೊಯ್ಯಲು ಪ್ರತಿಯೊಬ್ಬರ ಕೊಡುಗೆ ಅತ್ಯಗತ್ಯ ಎಂದರು.
ರಾಷ್ಟ್ರದ ಅಭಿವೃದ್ಧಿಯಲ್ಲಿ ವಿಶ್ವವಿದ್ಯಾಲಯಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಪ್ರಾಯೋಗಿಕ, ಸಾಮಾಜಿಕ ಮತ್ತು ಹೊಸ ಸಂಶೋಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಮುಂದಾಗಬೇಕು ಎಂದು ತಿಳಿಸಿದರು.
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತಿತರರು ಘಟಿಕೋತ್ಸವದಲ್ಲಿ ಉಪಸ್ಥಿತರಿದ್ದರು.